ವೀರಶೈವ ಲಿಂಗಾಯತ ಧರ್ಮದ ಬಗ್ಗೆ ಚಿಂತನೆ ನಡೆಸಲಿ

SEP 08-HRP-04
Published on

ಹರಪನಹಳ್ಳಿ: ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯಿಂದ ಬಳ್ಳಾರಿ-ವಿಜಯನಗರ ಹಾಗೂ ದಾವಣಗೆರೆ ಜಿಲ್ಲಾ ಘಟಕಗಳಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ತೆಗ್ಗಿನಮಠ ಸಂಸ್ಥಾನದ ಸಭಾಭವನದಲ್ಲಿ ಸೋಮವಾರ ಜರುಗಿತು.

ರಾಷ್ಟ್ರೀಯ ಶಿವಾಚಾರ್ಯ ಸಂಸ್ಥೆ ವಕ್ತಾರರೂ ಆದ ಹಂಪಿ ಸಾವಿರ ದೇವರ ಸಂಸ್ಥಾನಮಠದ ವಾಮದೇವ ಮಹಾಂತ ಶಿವಾಚಾರ್ಯರು ಸಭೆಯ ಸಾನ್ನಿಧ್ಯ ವಹಿಸಿದ್ದರು. ಪ್ರತಿಯೊಬ್ಬರೂ ವೀರಶೈವ ಲಿಂಗಾಯತ ಧರ್ಮದ ಬಗ್ಗೆ ಚಿಂತನೆ ನಡೆಸಬೇಕು, ವೀರಶೈವ ಪಂಚಪೀಠಗಳು, ಬಸವಾದಿ ಶಿವಶರಣರ ತತ್ವಗಳನ್ನು ಮತ್ತು ಹಾನಗಲ್ ಗುರುಕುಮಾರ ಮಹಾ ಶಿವಯೋಗಿಗಳ ಧ್ಯೇಯೋದ್ದೇಶಗಳನ್ನು ಅನುಷ್ಠಾನಗೊಳಿಸಲು ಶ್ರಮಿಸಬೇಕು ಎಂದರು.

ವೀರಶೈವ ಲಿಂಗಾಯತ ಧರ್ಮಗ್ರಂಥವಾದ ಸಿದ್ಧಾಂತ ಶಿಖಾಮಣಿಯನ್ನು ಸರಳ ಮತ್ತು ಸಾಹಿತ್ಯ ರೂಪದಲ್ಲಿ ಹೊರತರುವ ಪ್ರಯತ್ನ ಮಾಡುವ ಬಗ್ಗೆ, ನಾಡು, ನುಡಿ, ಸಂಸ್ಕೃತಿ, ಕಲೆ ಮತ್ತು ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವುದು, ಪ್ರತಿಭಾ ಪುರಸ್ಕಾರ, ಲಿಂಗದೀಕ್ಷೆ ಅಭಿಯಾನ ಮತ್ತು ಸಂಸ್ಥೆಯನ್ನು ಬಲಪಡಿಸಲು ಆರ್ಥಿಕ ದತ್ತಿನಿಧಿ ಸ್ಥಾಪಿಸುವಂತಹ ಸಮಾಜಮುಖಿ ಕಾರ್ಯಗಳನ್ನು ಭವಿಷ್ಯದಲ್ಲಿ ಕಾರ್ಯಗತಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಈ ಸಂದರ್ಭ ತೆಗ್ಗಿನಮಠದ ಆಡಳಿತಾಧಿಕಾರಿ ಡಾ. ಟಿ.ಎಂ. ಚಂದ್ರಶೇಖರಯ್ಯ, ತೆಗ್ಗಿನಮಠದ ವರಸದ್ಯೋಜಾತ ಶಿವಾಚಾರ್ಯರು, ಎಮ್ಮಿಗನೂರಿನ ವಾಮದೇವ ಮಹಾಂತ ಶಿವಾಚಾರ್ಯರು, ಮರಿಯಮ್ಮನಹಳ್ಳಿಯ ಮಲ್ಲಿಕಾರ್ಜುನ ಶಿವಾಚಾರ್ಯರು ಮತ್ತು ಬುಕ್ಕಸಾಗರದ ಕರಿಸಿದ್ಧೇಶ್ವರ ವಿಶ್ವಾರಾಧ್ಯ ಶಿವಾಚಾರ್ಯರು ಸಭೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net