ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Published on

ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ವೀರಶೈವ ಲಿಂಗಾಯತ ಮಠಾಧಿಪತಿಗಳ ಗೋಷ್ಠಿಯಿಂದ ಪ್ರತಿಭಾ ಪುರಸ್ಕಾರ ನಗದು ಬಹುಮಾನಕ್ಕೆ ಎಸ್‌ಎಸ್ ಎಲ್‌ಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚು ಅಂಕದೊಂದಿಗೆ ಉತ್ತೀರ್ಣರಾದ ವೀರಶೈವ, ಲಿಂಗಾಯತ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್, ಮೊಬೈಲ್ ಸಂಖ್ಯೆಯೊಂದಿಗೆ ಜೂ.30ರ ಒಳಗೆ ಕಾರ್ಯದರ್ಶಿಗಳು, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ವೀರಶೈವ ಲಿಂಗಾಯತ ಮಠಾಧಿಪತಿಗಳ ಗೋಷ್ಠಿ, ಜಗದ್ಗುರು ಡಾ.ಶ್ರೀಶಿವರಾತ್ರಿ ರಾಜೇಂದ್ರ ವೃತ್ತ, ಮೈಸೂರು. ಇಲ್ಲಿಗೆ ಕಳುಹಿಸಬಹುದು. ಮಾಹಿತಿಗೆ ಮೊಬೈಲ್ ಸಂಖ್ಯೆ 9449030588 ಅನ್ನು ಸಂಪರ್ಕಿಸುವಂತೆ ಸಂಘಟಕರಾದ ಸಿ.ಮಹದೇವಪ್ರಸಾದ್ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net