ವೀರಶೈವ ಲಿಂಗಾಯತ ಸಮಾಜ ಪ್ರತಿಭಟನೆ ಆ.1ಕ್ಕೆ

Veerashaiva, Chitradurga, Rotary, Annaberu Rajanna,
Published on

ಚಿತ್ರದುರ್ಗ: ವೀರಶೈವ ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳನ್ನು ಕೇಂದ್ರ ಸರ್ಕಾರ ಒಬಿಸಿ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿ ಆ.1ರಂದು ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ವೀರಶೈವ ಮಹಾಸಭಾ ನಿರ್ಧರಿಸಿದೆ.

ನಗರದ ರೋಟರಿ ಬಾಲಭವನದಲ್ಲಿ ಭಾನುವಾರ ನಡೆದ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ವೀರಶೈವ ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳ ಮುಖಂಡರ ಸಭೆಯಲ್ಲಿ ಈ ಬಗ್ಗೆ ನಿರ್ಣಯಿಸಲಾಯಿತು.

ಆಗಸ್ಟ್ 1ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ಬೇಡಿಕೆ ಈಡೇರಿಕೆ ನಿಟ್ಟಿನಲ್ಲಿ ಮುಂದಿನ ಹೋರಾಟಗಳ ಕುರಿತಂತೆ ಚರ್ಚೆ ನಡೆಸಲಾಯಿತು.

ಬೇಡಿಕೆ ಈಡೇರಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುವುದಾಗಿ ಮಹಾಸಭಾ ಹಿರಿಯ ಮುಖಂಡ ಅಣಬೇರು ರಾಜಣ್ಣ ಹೇಳಿದರು.

ವೀರಶೈವ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ರೇಣುಕ ಪ್ರಸನ್ನ, ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಜಿ.ಎನ್.ಮಹೇಶ್, ರುದ್ರೇಶ್, ಆರತಿ ಮಹಡಿ ಶಿವಮೂರ್ತಿ, ವೀಣಾ ವೀರಭದ್ರಪ್ಪ, ಜಿ.ಗಂಗಾಧರಪ್ಪ, ಕಾರ್ತಿಕ್, ನಾಗರಾಜ ಸಂಗಮ್, ಚಂಪಾ, ಸುರೇಶ್, ಜಿತೇಂದ್ರ ಹುಲಿಕುಂಟೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net