ವೀರಶೈವ ಲಿಂಗಾಯತರು ಧರ್ಮದ ಕಾಲಂನಲ್ಲಿ ಹಿಂದು ಎಂದೇ ನಮೂದಿಸಿ

22 ckm 2 lokesh
ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ಎಂ.ಲೋಕೇಶ್
Published on

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತೀರ್ಮಾನದಂತೆ ಕರ್ನಾಟಕ ಸರ್ಕಾರವು ನಡೆಸುತ್ತಿರುವ ಆರ್ಥಿಕ, ಸಾಮಾಜಿಕ ಗಣತಿ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯುತರು ಧರ್ಮದ ಕಾಲಂನಲ್ಲಿ ಹಿಂದು ಹಾಗೂ ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಹಾಗೂ ಉಪಜಾತಿ ಕಾಲಂನಲ್ಲಿ ಅವರವರ ಉಪಜಾತಿಗಳನ್ನು ನಮೂದಿಸಬೇಕು ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ಎಂ.ಲೋಕೇಶ್ ಮನವಿ ಮಾಡಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾವು ತೆಗೆದುಕೊಂಡಿರುವ ತೀರ್ಮಾನದಂತೆ ವೀರಶೈವ ಲಿಂಗಾಯತ ಸಮುದಾಯವು ಮುಂದುವರಿಯಬೇಕು ಎಂದು ಹೇಳಿದರು.

ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಟ ಮುಂದುವರಿಯಲಿದೆ. ಇದರಲ್ಲಿ ರಾಜೀ ಪ್ರಶ್ನೆಯೇ ಇಲ್ಲ. ಮಹಾಸಭಾ ಸೂಚನೆಯಂತೆ ನಾವೆಲ್ಲರೂ ಒಗ್ಗಟ್ಟಿನಿಂದ ನಡೆದುಕೊಳ್ಳಬೇಕಿದೆ. ಈ ಮೂಲಕ ಶತಮಾನದ ಇತಿಹಾಸವಿರುವ ದೇಶದ ಏಕೈಕ ಹಿರಿಯ ಸಂಸ್ಥೆ ಅಖಿಲಭಾರತ ವೀರಶೈವ ಲಿಂಗಾಯತದ ತೀರ್ಮಾನ ಗೌರವಿಸಿ ಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಶ್ರೀ ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಚಾರ್ಯ ಸ್ವಾಮೀಜಿ ಮಾತನಾಡಿ, ವೀರಶೈವ ಲಿಂಗಾಯತ ಸಮಾಜವನ್ನು ತುಳಿಯುವ ಷಡ್ಯಂತ್ರ ನಡೆಯುತ್ತಿದೆ. ವೀರಶೈವ ಮತ್ತು ಲಿಂಗಾಯತರನ್ನು ಪ್ರತ್ಯೇಕ ಮಾಡುವ ಹುನ್ನಾರವನ್ನು ಈ ಸರ್ಕಾರ ನಡೆಸುತ್ತಿದೆ. ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬೀರೂರಿನ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಮಹಾಸಭಾದ ಮುಖಂಡರಾದ ನಿಶಾಂತ್, ರೇಣುಕಾರಾಧ್ಯ, ಗಿರಿರಾಜ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net