

ಹಾಸನ: ಜಿಲ್ಲಾ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬುಧವಾರ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರು ತಮ್ಮ ಸಮಾಜದ ಮುಖಂಡರ ಸಮ್ಮುಖದಲ್ಲಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಲಾಗಿದೆ. ಈ ಹಿಂದೆ ಈ ಮಹಾಸಭಾದ ಬೇಲೂರು ತಾಲೂಕು ಘಟಕದ ಅಧ್ಯಕ್ಷನಾಗಿ 5 ವರ್ಷಗಳ ಕಾಲ ಕೆಲಸ ಮಾಡಿದ್ದು, ಜೊತೆಗೆ ಶಾಸಕನಾಗಿ ಕೂಡ ಸೇವೆ ಸಲ್ಲಿಸಿದ್ದೇನೆ. ಜಿಲ್ಲೆಯ ಎಲ್ಲಾರ ಅಭಿಪ್ರಾಯದ ಮೇರೆಗೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದೇನೆ ಎಂದರು.
ಈ ಜಿಲ್ಲೆಯಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನು ಎಲ್ಲಾ ರೀತಿಯಲ್ಲೂ ಕೂಡ ಬಲಪಡಿಸುವಂತಹ ಗುರಿ ಹೊಂದಿದ್ದೇನೆ. ಈ ಚುನಾವಣೆ ಮಾಡದೇ ಸಂಘಕ್ಕೆ ಅವಿರೋಧವಾಗಿ ಆಯ್ಕೆ ಮಾಡುವ ಸಂಬಂಧ ಸಮಾಜದ ಮುಖಂಡರು ಕುಳಿತು ಚರ್ಚಸಿ ನಿರ್ಧರಿಸಲಾಗುವುದು. ನಗರದಲ್ಲಿ ಮುಖ್ಯವಾಗಿ ಸಮುದಾಯಕ್ಕೆ ಹಾಸ್ಟೇಲ್ ವ್ಯವಸ್ಥೆ, ಮತ್ತು ನಮ್ಮ ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ವಾತವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ತಮ್ಮ ಗುರಿಯನ್ನು ಹಾಕಲಾಗಿದೆ ಎಂದು ಹೇಳಿದರು. ಇಡೀ ಜಿಲ್ಲೆಯಲ್ಲಿ ಸಾಮಾಜಿಕವಾಗಿ, ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಬಲಪಡಿಸುವ ಉದ್ದೇಶ ಹೊಂದಲಾಗಿದೆ ಈ ಚುನಾವಣೆಗೆ ಸ್ಪರ್ಧೆ ಮಾಡಿದ್ದಾನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಲಿಂಗರಾಜು, ಅದ್ಧೂರಿ ಕುಮಾರ್, ಬೇಲೂರು ತಾಲೂಕು ಅಭ್ಯರ್ಥಿ ಆಕಾಂಕ್ಷಿ ಬೆಣ್ಣೂರು ಯೋಗೀಶ್, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಸುಧಾ, ರವಿಕುಮಾರ್, ಗೀತಾ ಪುಟ್ಟಸ್ವಾಮಿ, ಶೋಭನ್ ಬಾಬು, ಬಲ್ಲೇನಹಳ್ಳಿ ರವಿಕುಮಾರ್, ಶಿವಣ್ಣ, ಸೋಮಶೇಖರ್, ನಾಗಭೂಷಣ್, ಚಂದ್ರಶೇಖರ್ ಸೇರಿದಂತೆ ಇತರರು ಇದ್ದರು.