ವೃತ್ತ ನವೀಕರಿಸಿ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪಿಸಿ

28 KAMPLI 02
Published on

ಕಂಪ್ಲಿ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತವನ್ನು ನವೀಕರಿಸಿ ಪುತ್ಥಳಿ ಪ್ರತಿಷ್ಠಾಪಿಸಬೇಕು ಎಂದು ಒತ್ತಾಯಿಸಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್‌ಗೆ ಸಂವಿಧಾನ ಸಂರಕ್ಷಣಾ ಒಕ್ಕೂಟದ ಪದಾಧಿಕಾರಿಗಳು ಮಂಗಳವಾರ ಮನವಿ ಸಲ್ಲಿಸಿದರು.

ಒಕ್ಕೂಟದ ತಾಲೂಕು ಅಧ್ಯಕ್ಷ ಜಿ.ರಾಮಣ್ಣ ಮಾತನಾಡಿ, ಪುರಸಭೆ ಬಳಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ವೃತ್ತವನ್ನು ನವೀಕರಿಸಿ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪಿಸುವಂತೆ ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದೇವೆ. ವೃತ್ತದ ಬದಿಯ ಪಾದಚಾರಿ ಮಾರ್ಗ ತೆರವುಗೊಳಿಸಿ, ವೃತ್ತವನ್ನು ನವೀಕರಿಸಿ ಅಂಬೇಡ್ಕರ್ ಪುತ್ಥಳಿ ಸ್ಥಾಪಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಮಾತನಾಡಿ, 2025ರ ಏ.14ರೊಳಗಾಗಿ ಅಂಬೇಡ್ಕರ್ ವೃತ್ತವನ್ನು ನವೀಕರಿಸುವುದಾಗಿ ಭರವಸೆ ನೀಡಿದರು. ಪ್ರಮುಖರಾದ ಬಿ.ರಮೇಶ್, ಭಾಸ್ಕರರೆಡ್ಡಿ, ಎ.ಹನುಮಂತ, ಜಾಫರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net