ವೃತ್ತಿ ಮಾರ್ಗದರ್ಶನ ತರಬೇತಿಗೆ ಅರ್ಜಿ ಆಹ್ವಾನ

Published on

ಕಲಬುರಗಿ: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ) ಹಾಗೂ ೩(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ೨೦೨೪-೨೫ನೇ ಸಾಲಿನಲ್ಲಿ ಅಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ತರಬೇತಿ ಉಚಿತವಾಗಿ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಅಭ್ಯರ್ಥಿ ಮತ್ತು ಕುಟುಂಬದ ಗರಿಷ್ಠ ವಾರ್ಷಿಕ ಆದಾಯ ಪ್ರವರ್ಗ-೧ಕ್ಕೆ ೨.೫೦ ಲಕ್ಷ ರೂ. ಹಾಗೂ ಪ್ರವರ್ಗ ೨(ಎ), ೩(ಎ) ಮತ್ತು ೩(ಬಿ)ಗಳಿಗೆ ೧ ಲಕ್ಷ ರೂ.ಗೆ ಮೀರಿರಬಾರದು. ೧೦ನೇ ತರಗತಿ ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ ೩೩ ಮತ್ತು ಸರಾಸರಿ ಶೇ.೪೫ ಅಂಕ ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನ ಗ್ರೇಡ್ ಪಡೆದಿರಬೇಕು. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಗಳು ಈ ಮೂರು ಜಿಲ್ಲೆಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಂಡು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಜು.೧೦ ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆಗಳಾದ ದಕ್ಷಿಣ ಕನ್ನಡ-೦೮೨೪ ೨೨೨೫೦೭೮, ಉಡುಪಿ-೦೮೨೦ ೨೫೭೪೮೮೧ ಹಾಗೂ ಉತ್ತರ ಕನ್ನಡ-೦೮೩೮೨-೨೨೬೫೮೯ ಗಳನ್ನು ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net