ವೆಂಕಟರಮಣಸ್ವಾಮಿ ದೇವಾಲಯದಲ್ಲಿ ರಥೋತ್ಸವ

19-GPT-3-
ಗುಂಡ್ಲುಪೇಟೆ ತಾಲೂಕಿನ ಹುಲಿಗಿನಮುರಡಿ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
Published on

ಗುಂಡ್ಲುಪೇಟೆ: ತಾಲೂಕಿನ ಹುಲಿಗಿನಮುರಡಿ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಶನಿವಾರ ಶ್ರಾವಣ ಮಾಸದ ರಥೋತ್ಸವ ನಡೆಯಿತು.

ಚಿಕ್ಕತಿರುಪತಿ ಎಂದೇ ಕರೆಯಲಾಗುವ ದೇವಾಲಯದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಚಿಕ್ಕಜಾತ್ರೆ ನೆರವೇರಿತು. ಮಧ್ಯಾಹ್ನ 12 ಗಂಟೆಗೆ ಉತ್ಸವ ಮೂರ್ತಿಗಳನ್ನು ರಥದಲ್ಲಿರಿಸಿ ನಂತರ ದಿವ್ಯ ರಥೋತ್ಸವ ನಡೆಸಲಾಯಿತು.

ತಹಸೀಲ್ದಾರ್ ರಮೇಶ್ ಬಾಬು ರಥೋತ್ಸವಕ್ಕೆ ಚಾಲನೆ ನೀಡಿದರು. ನಂತರ ಭಕ್ತರು ಗೋವಿಂದ.. ಗೋವಿಂದ.. ಎಂಬ ನಾಮಸ್ಮರಣೆಯೊಂದಿಗೆ ರಥವನ್ನು ದೇವಾಲಯ ಸುತ್ತ ಎಳೆದರು. ನವದಂಪತಿಗಳು ಹಣ್ಣು -ಧವನ ಎಸೆದು ಪುನೀತರಾದರು.

ಸಾರಿಗೆ ಸಂಸ್ಥೆ ವತಿಯಿಂದ ಹೆಚ್ಚಿನ ಬಸ್‌ಗಳನ್ನು ನಿಯೋಜಿಸಿತ್ತು. ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ ಎಲ್ಲ ವಾಹನಗಳನ್ನು ಬೆಟ್ಟದ ತಪ್ಪಲಿನಲ್ಲಿ ನಿಲ್ಲುವಂತೆ ತೆರಕಣಾಂಬಿ ಪೊಲೀಸರು ಕ್ರಮ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net