ವೇತನಕ್ಕಾಗಿ ಬಿಸಿಯೂಟ ನೌಕರರ ಪ್ರತಿಭಟನೆ

24-3
ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಬಿಸಿಯೂಟ ನೌಕರರು ಬೆಳಗಾವಿ ಜಿಪಂ ಆವರಣದಲ್ಲಿ ಶುಕ್ರವಾರ ಪ್ರತಿಭಟಿಸಿದರು. ಜಿ.ಎಂ.ಜೈನೇಖಾನ, ಎಲ್.ಎಸ್.ನಾಯಕ, ತುಳಸಮ್ಮ ಮಾಳದಕರ, ಸುಮನ ಗಡಾದ ಇತರರಿದ್ದರು.
Published on

ಬೆಳಗಾವಿ: ಬಿಸಿಯೂಟದ ನೌಕರರಿಗೆ ವೇತನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಸಿಐಟಿಯು ನೇತೃತ್ವದಲ್ಲಿ ಬಿಸಿಯೂಟ ನೌಕರರು ನಗರದ ಜಿಪಂ ಕಚೇರಿ ಆವರಣದಲ್ಲಿ ಪ್ರತಿಭಟಿಸಿ, ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ನೌಕರರಿಗೆ 4 ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಜೀವನ ಸಾಗಿಸುವುದು ಕಷ್ಟಸಾಧ್ಯವಾಗಿದೆ. ಬೆಲೆ ಏರಿಕೆಯಿಂದ ಕಂಗಾಲಾಗಿರುವ ಬಿಸಿಯೂಟದ ಮಹಿಳೆಯರು ದಿನ ಬಳಕೆಯ ವಸ್ತುಗಳನ್ನು ಕೊಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಇವರ ಮೇಲೆ ಕಡಿಮೆ ಬೆಲೆಯಲ್ಲಿ ವಸ್ತುಗಳನ್ನು ಖರೀದಿಸುವಂತೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಕೂಡಲೇ ವೇತನ ನೀಡಬೇಕೆಂದು ಒತ್ತಾಯಿಸಿದರು.

ಅಕ್ಷರ ದಾಸೋಹ ನೌಕರರ ಸಂಘದ ಕಾರ್ಯದರ್ಶಿ ಜಿ.ಎಂ.ಜೈನೇಖಾನ, ಎಲ್.ಎಸ್.ನಾಯಕ, ತುಳಸಮ್ಮ ಮಾಳದಕರ, ಸುಮನ ಗಡಾದ, ಪಾರ್ವತಿ ಕೌಜಲಗಿ, ಸುನೀಯಾ ಹುಕ್ಕೇರಿ, ಭಾರತಿ ಜೋಗನ್ನವರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net