ವೇಯ್ಟ ಲಿಫ್ಟಿಂಗ್‌ಪ್ರಥಮ ಸ್ಥಾನ

6
Published on

ವಿಜಯವಾಣಿ ಸುದ್ದಿಜಾಲ ಆನೇಕಲ್

ಚಂದಾಪುರದ ಸ್ವಾಮಿ ವಿವೇಕಾನಂದ ಗ್ರಾಮಾಂತರ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಅಂತರ ಕಾಲೇಜು ಮಟ್ಟದ ವೇಯ್ಟ ಲಿಫ್ಟಿಂಗ್ ಚಾಂಪಿಯನ್ ಶಿಪ್ -2024 ಆಯೋಜಿಸಲಾಗಿತ್ತು.

ಸ್ಪರ್ಧೆಯ ಮಹಿಳಾ ವಿಭಾಗದಲ್ಲಿ ಕನಕಪುರ ರಸ್ತೆಯ ತಾತಗುಣಿ ಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಕಾರ್ಮಸ್ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದರು. ಮಾಗಡಿ ಸರ್ಕಾರಿ ಕಾಲೇಜು ಮತ್ತು ಚಂದಾಪುರದ ಸ್ವಾಮಿ ವಿವೇಕಾನಂದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದರು.

ಪುರುಷರ ವಿಭಾಗದಲ್ಲಿ ಕನಕಪುರ ರಸ್ತೆಯ ತಾತಗುಣಿ ಜ್ಯೋತಿ ಕಾಲೇಜು ಪ್ರಥಮ ಸ್ಥಾನ, ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಬೆಂಗಳೂರಿನ ಸೌಂದರ್ಯ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ಟ್ರೋಫಿ ತಮ್ಮದಾಗಿಸಿಕೊಂಡರು.

ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯ ಕನಕಪುರ, ರಾಮನಗರ, ಮಾಗಡಿ, ಚನ್ನಪಟ್ಟಣ, ಆನೇಕಲ್ ಸೇರಿದಂತೆ ವಿವಿಧ ಕಾಲೇಜುಗಳ 140ಕ್ಕೂ ಹೆಚ್ಚು ಮಂದಿ ಸ್ಪರ್ಧಿಗಳು ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಅಧ್ಯಕ್ಷ ಗೋಪಾಲರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು.

ವೇಯ್ಟ ಲಿಫ್ಟಿಂಗ್ ಅಸೋಸಿಯೇಷನ್ ಕಾರ್ಯದರ್ಶಿ ಆನಂದಗೌಡ , ಸಂಸ್ಥೆ ಆಡಳಿತಾಧಿಕಾರಿ ಕಿರಣ್ ಕುಮಾರ್, ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಟಿ.ಎಸ್.ವೆಂಕಟೇಶ್ ಬಾಬು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net