

ಚಿತ್ರದುರ್ಗ:ನಗರದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ನಿನ್ನೆ ದಾಳಿ ನಡೆಸಿ ಮೂವರನ್ನು ರಕ್ಷಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮ ಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ನಗರದ ಶಾಮರಾವ್ ಬಡಾವಣೆಯ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ರಾಜಪ್ಪ ಹಾಗೂ ರೇಖಾ ಎಂಬಿಬ್ಬರನ್ನು ಬಂಧಿಸಲಾಗಿದೆ. ಡಿವೈಎಸ್ಪಿ ದಿನಕರ್,ಪಿಐ ಮುದ್ದುರಾಜ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರಿದಿದೆ.