

ಕುಶಾಲನಗರ: ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಕುಶಾಲನಗರ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.
ಡಿವೈಎಸ್ಪಿ ಗಂಗಾಧರಪ್ಪ ಅವರ ಆದೇಶದ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಮಹೇಶ್ ನೇತೃತ್ವದಲ್ಲಿ ದಾಳಿ ನಡೆದಾಗ ವೇಶ್ಯಾವಾಟಿಕೆ ನಡೆಸುತ್ತಿದ್ದವರು ಸಿಕ್ಕಿ ಬಿದ್ದಿದ್ದಾರೆ.
ಶಾಂತಳ್ಳಿ ನಿವಾಸಿಯೊಬ್ಬರ ಹಾರಂಗಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿಂಭಾಗದ ಮನೆಯನ್ನು ಸ್ಥಳೀಯ ಮಹಿಳೆಯೊಬ್ಬರು ಬಾಡಿಗೆಗೆ ಪಡೆದಿದ್ದಾರೆ. ಹೊರ ಊರಿನ ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಮಹಿಳೆ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದು, ಉಳಿದ ಮೈಸೂರಿನ ಇಬ್ಬರು ಸಂತ್ರಸ್ತ ಮಹಿಳೆಯರನ್ನು ವಿಚಾರಣೆ ನಡೆಸಿ ರಕ್ಷಿಸಿದ್ದಾರೆ.