ವೈ.ಎನ್.ಶಂಕರೇಗೌಡಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡಿ

30BANNU1
Published on

ಬನ್ನೂರು: ಯಾಚೇನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೈ.ಎನ್. ಶಂಕರೇಗೌಡ ಕಾಂಗ್ರೆಸ್‌ನಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು, ಅವರಿಗೆ ರಾಜ್ಯ ಸರ್ಕಾರದ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಶಂಕರೇಗೌಡರ ಅನುಯಾಯಿಗಳು, ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು, ಗ್ರಾಮದ ಮುಖಂಡರು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಮನವಿ ಮಾಡಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಎಚ್.ಸಿ.ಮಹದೇವಪ್ಪ, ಶಂಕರೇಗೌಡ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಮುಂಚೂಣಿಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಸಾಮಾಜಿಕ ಸೇವೆಯ ಜತೆಗೆ ಸಂಘಟನೆ ಮಾಡುತ್ತ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಉತ್ತಮ ಸೇವೆ ನೀಡಿದ್ದಾರೆ. ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

ನಾದಾನಂದನಾಥ ಸ್ವಾಮೀಜಿ, ಮಾಜಿ ಶಾಸಕಿ ಜೆ. ಸುನೀತಾ ವೀರಪ್ಪಗೌಡ, ವಜ್ರೇಗೌಡ, ತುರಗನೂರು ಚಾಮೇಗೌಡ, ಮಾರಗೌಡನಹಳ್ಳಿ ಸುಧೀರ್, ಬನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚನ್ನಕೇಶವ, ಯಾಚೇನಹಳ್ಳಿ ಹನುಮಂತೇಗೌಡ, ಯಾಚೇನಹಳ್ಳಿ ಬೋರೇಗೌಡ, ಕ್ಯಾತೇಗೌಡ, ದೊಡ್ಡಮುಲಗೂಡು ಸ್ವಾಮೀಗೌಡ, ಸೋಮಶೇಖರ್, ಮಹೇಂದ್ರ, ಶೇಖರ್, ಹನುಮನಾಳು ಮರೀಗೌಡ, ಕೃಷ್ಣೇಗೌಡ, ದೇವರಾಜ್, ಮಹೇಂದ್ರ, ನಂದೀಶ್, ನಾಗೇಶ್, ಪುಟ್ಟರಾಜು, ತುರಗನೂರು ಲಕ್ಷ್ಮಣ, ಯಾಚೇನಹಳ್ಳಿ ರಾಘವೇಂದ್ರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net