ವೈಡಿಡಿ ಸರ್ಕಾರಿ ಕಾಲೇಜಿನ ಅಭಿವೃದ್ಧಿಗೆ ಶ್ರಮ

ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪುಟ್ಟರಾಜು ಅವರನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಸನ್ಮಾನಿಸಿ ಬೀಳ್ಕೊಟ್ಟರು. ಸಿ.ಎಚ್.ಮಹೇಶ್, ಸೌಮ್ಯಾ ಆನಂದ್, ಶಿವಮೂರ್ತಿ, ಸತೀಶಗೌಡ, ಸಿ.ಎಂ.ಪೃಥ್ವಿ ಇತರರಿದ್ದರು.
10blrp4
Published on

ಬೇಲೂರು: ಪಟ್ಟಣದ ಸಮೀಪದ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪುಟ್ಟರಾಜು ಅವರನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಬುಧವಾರ ಸನ್ಮಾನಿಸಿ, ಬೀಳ್ಕೊಟ್ಟರು.


ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸಿ.ಎಚ್.ಮಹೇಶ್ ಮಾತನಾಡಿ, ಮೂರು ವರ್ಷದಿಂದ ನಮ್ಮ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಉತ್ತಮ ಸೇವೆ ಸಲ್ಲಿಸಿದ ಪುಟ್ಟರಾಜು ಅವರು, ಕಾಲೇಜಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಜತೆಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಮಯ ಪಾಲನೆಯೊಂದಿಗೆ, ಕಾಲೇಜಿಗೆ ಹೆಚ್ಚುವರಿ ಕಟ್ಟಡ ಸೇರಿದಂತೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾದ ಚಟುವಟಿಕೆ ನೀಡಿದ್ದಾರೆ. ಅವರ ನಿವೃತ್ತಿ ಜೀವನವು ಮುಂದಿನ ದಿನಗಳಲ್ಲಿ ಆರೋಗ್ಯಕರವಾಗಿರಲಿ ಎಂದರು.


ತಾಲೂಕು ಕಸಾಪ ಅಧ್ಯಕ್ಷ ಬಿ.ಎಲ್.ರಾಜೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿಷ್ಠಿತ ಕಾಲೇಜು ಎಂಬ ಹೆಗ್ಗಳಿಕೆಗೆ ನಮ್ಮ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಾತ್ರವಾಗಿದೆ. ವಿಶಾಲವಾದ ಮೈದಾನ, ಅಗತ್ಯ ಕೊಠಡಿಗಳು ಅಧುನಿಕ ತಂತ್ರಜ್ಞಾನದಿಂದ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನ ನೀಡುವಲ್ಲಿ ಕಾಲೇಜು ಮುಂದಿದೆ. ಅಲ್ಲದೆ ಪ್ರಾಂಶುಪಾಲರಾಗಿ ಪುಟ್ಟರಾಜು ಅವರ ಕಾರ್ಯ ಉತ್ತಮವಾಗಿತ್ತು. ನಿವೃತ್ತಿಗೆ ಮಾತ್ರ ವಯಸ್ಸಾಗಿದೆ ಹೊರತು ಅವರು ಇನ್ನೂ ಆರೋಗ್ಯಕರವಾಗಿ ಸದೃಢರಾಗಿದ್ದಾರೆ. ನಿವೃತ್ತಿಯ ನಂತರ ಅವರು ಕೃಷಿಯೊಂದಿಗೆ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿ ಎಂದರು.
ಪತ್ರಕರ್ತರ ಸಂಘದ ಅಧ್ಯಕ್ಷ ಹೆಬ್ಬಾಳು ಹಾಲಪ್ಪ, ಪ್ರಧಾನ ಕಾರ್ಯದರ್ಶಿ ಪೇಂಟ್ ರವಿಯ ಅವರನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಸೌಮ್ಯಾ ಆನಂದ್ ಮತ್ತು ನಿವೃತ್ತ ಪ್ರಾಂಶುಪಾಲ ಪುಟ್ಟರಾಜು ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಸಾಪ ಮಾಜಿ ಅಧ್ಯಕ್ಷ ಮಾ.ಶಿವಮೂರ್ತಿ, ವೈಡಿಡಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸತೀಶಗೌಡ, ಸಿ.ಎಂ.ಪೃಥ್ವಿ, ಸುರೇಶ್, ವಿಜಯಕುಮಾರ್, ಹರೀಶ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net