

ಬಳ್ಳಾರಿ : ಕೊಲ್ಕತ್ತಾದ ಬಿ.ಆರ್. ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಹತ್ಯೆ ಖಂಡಿಸಿ, ಎಐಎಂಎಸ್‌ಎಸ್, ಎಐಡಿವೈಒ ಹಾಗೂ ಎಐಡಿಎಸ್‌ಒ ಸಂಘಟನೆಯಿಂದ ನಗರದ ಕನಕ ದುರ್ಗಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ರ‌್ಯಾಲಿ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಎಐಎಂಎಸ್‌ಎಸ್ ಸಂಘಟನೆ ರಾಜ್ಯಾಧ್ಯಕ್ಷೆ ಎಂ.ಎನ್. ಮಂಜುಳಾ ಮಾತನಾಡಿ, ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಭೀಕರ ಹತ್ಯೆಯ ಘಟನೆ ಅತ್ಯಂತ ಆಘಾತಕಾರಿಯಾಗಿದೆ. ಈ ಕೃತ್ಯ ಎಸಗಿರುವ ಅಪರಾಧಿಗಳನ್ನು ರಕ್ಷಿಸಲು ಗೂಂಡಾಗಳು ನಡೆಸಿರುವ ಈ ಉದ್ದೇಶಪೂರ್ವಕ ಮತ್ತು ವ್ಯವಸ್ಥಿತ ದಾಳಿಯನ್ನು ಖಂಡಿಸಿದೆ. ಈ ಕೃತ್ಯಕ್ಕೆ ಕಾರಣರಾದ ನಿಜವಾದ ಅಪರಾಧಿಗಳನ್ನು ಪತ್ತೆ ಹಚ್ಚಲು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಅಪರಾಧಿಗಳಿಗೆ ನಿದರ್ಶನೀಯ ಉಗ್ರ ಶಿಕ್ಷೆ ನೀಡಬೇಕು. ಸಾವಿಗೀಡಾದ ವೈದ್ಯ ವಿದ್ಯಾರ್ಥಿನಿಯ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು. ವೈದ್ಯರು, ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳು, ಆಸ್ಪತ್ರೆ ಸಿಬ್ಬಂದಿ, ರೋಗಿಗಳ ಮತ್ತು ಬಂಧುಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು ಎಂದರು.