ವೈದ್ಯಕೀಯ ಸಂಸ್ಥೆಗಳ ಸಾಮ್ರಾಜ್ಯ ನಿರ್ಮಾಣ

bkt-21-5
ಬಾಗಲಕೋಟೆ ನಗರದ ಬಿವಿವಿ ಸಂಘದ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ೨೦೨೪-೨೫ ನೇ ಸಾಲಿನ ಬಿ.ಡಿ.ಎಸ್ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಬಿವಿವಿ ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ (ಬೇವೂರ) ಉದ್ಘಾಟಿಸಿದರು.
Published on

ಬಾಗಲಕೋಟೆ: ಬಿವಿವಿ ಸಂಘದ ಪಿ.ಎಂ.ಎನ್.ಎಂ ದಂತ ಮಹಾವಿದ್ಯಾಲಯ ರಾಜ್ಯದ ಪ್ರತಿಷ್ಠಿತ ಡೆಂಟಲ್ ಕಾಲೇಜು ಎನ್ನುವ ಗೌರವಕ್ಕೆ ಪಾತ್ರವಾಗಿದೆ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅಗತ್ಯವಾದ ಎಲ್ಲ ಸೌಕರ್ಯಗಳನ್ನು ಒದಗಿಸಲಾಗಿದೆ. ಡೆಂಟಲ್ ಆಸ್ಪತ್ರೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಬಿವಿವಿ ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ (ಬೇವೂರ) ಹೇಳಿದರು.

ನಗರದ ಬಿವಿವಿ ಸಂಘದ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ೨೦೨೪-೨೫ ನೇ ಸಾಲಿನ ಬಿ.ಡಿ.ಎಸ್ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಎಲ್ಲ ಬೆಳವಣಿಗೆಗಳ ಹಿಂದಿನ ರೂವಾರಿ ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಅವರು. ಉತ್ತರ ಕರ್ನಾಟಕದಲ್ಲಿ ವೈದ್ಯಕೀಯ ಸಂಸ್ಥೆಗಳ ಸಾಮ್ರಾಜ್ಯವನ್ನು ನಿರ್ಮಾಣ ಮಾಡಿದ ಶ್ರೇಯಸ್ಸು ಡಾ.ವೀರಣ್ಣ ಚರಂತಿಮಠ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

ವಿದ್ಯಾರ್ಥಿಗಳ ಜವಾಬ್ದಾರಿ ಸಂಸ್ಥೆಗೆ ಸೇರಿದ್ದು. ಪಾಲಕರು ಚಿಂತೆ ಮಾಡುವ ಅಗತ್ಯವಿಲ್ಲ. ಡೆಂಟಲ್ ಕಾಲೇಜಿನಲ್ಲಿ ಶಿಸ್ತು, ಶಿಕ್ಷಣದ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಕುರಿತಾದ ಕಾಳಜಿಗೆ ಮಹತ್ವ ನೀಡಲಾಗುತ್ತಿದೆ. ಓದಿಗೆ ಪ್ರಾಮುಖ್ಯತೆ ನೀಡಿ ವೃತ್ತಿಯಲ್ಲಿ ಶ್ರೇಷ್ಠವಾದದ್ದನ್ನು ಸಾಽಸಿ ಎಂದು ಹೇಳಿದರು.
ಹಾಸ್ಟೆಲ್ ಸಮಿತಿ ಕಾರ್ಯಾಧ್ಯಕ್ಷ ಕುಮಾರಸ್ವಾಮಿ ಹಿರೇಮಠ (ಚಿತ್ತರಗಿ) ಅವರು ವಸತಿ ನಿಲಯದ ಸೌಲಭ್ಯಗಳು ಮತ್ತು ಕ್ರೀಡಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಪ್ರಾಚಾರ್ಯ ಡಾ.ಶ್ರೀನಿವಾಸ ವನಕಿ, ಡಾ.ಜ್ಯೋತಿ ಪಟ್ಟಣಶೆಟ್ಟಿ ಸೇರಿದಂತೆ ಇತರರು ಇದ್ದರು. ಡಾ.ಭಾಗ್ಯಶ್ರೀ ವನಕಿ ನಿರೂಪಿಸಿದರು. ಡಾ.ಮಹೇಶ ಹಿರೇಗೌಡರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net