ವೈದ್ಯರು ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಲಿ

28kkr1(7-25 chc kik
Published on

ಕಿಕ್ಕೇರಿ: ವೈದ್ಯರು ಹಾಗೂ ಸಿಬ್ಬಂದಿ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಆರೋಗ್ಯ ರಕ್ಷಾಕವಚ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ವೈದ್ಯರ ಕೊರತೆ ಕಾಡುತ್ತಿದೆ. ತಾಲೂಕಿನಲ್ಲಿ ಬಲುದೊಡ್ಡ ಹೋಬಳಿ ಕೇಂದ್ರ ಕಿಕ್ಕೇರಿಯಾಗಿದೆ. ವೈದ್ಯರು, ಸಿಬ್ಬಂದಿ ಚಿಕಿತ್ಸೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ. ಒತ್ತಡವಿದೆ ಎಂದು ತಾಳ್ಮೆ ಕಳೆದುಕೊಳ್ಳದಿರಿ. ನಿಮ್ಮ ಮೃದು ಮಾತು ಅರ್ಧ ರೋಗಿಗಳ ಸಮಸ್ಯೆ ದೂರ ಮಾಡಲಿದೆ ಎಂದರು.

ಆಸ್ಪತ್ರೆಯಲ್ಲಿ ಸಿಬ್ಬಂದಿ ರೋಗಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶಕ್ಕೆ ವೈದ್ಯರು ಬರುತ್ತಿಲ್ಲ. ಆಸ್ಪತ್ರೆಯಲ್ಲಿ ವೈದ್ಯರು ತಿಳಿಸುವ ಮುನ್ನವೇ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ರಕ್ತ ಮತ್ತಿತರ ಪರೀಕ್ಷೆ ಮಾಡಿಸಿಕೊಂಡು ಬರುವಂತೆ ಹೇಳುತ್ತಾರೆ ಎಂಬ ದೂರಿದೆ. ಮೊದಲು ಇವುಗಳನ್ನು ಸರಿಪಡಿಸಿಕೊಳ್ಳಿ ಎಂದರು.

ಸಾರ್ವಜನಿಕರೂ ವೈದ್ಯರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ. ಒತ್ತಡದ ವೈದ್ಯರು ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಹಾಗಾಗಿ ಅವರು ಸಿಟ್ಟಿಗೇಳುವಂತಹ ಕೆಲಸಗಳನ್ನು ಮಾಡದಿರಿ ಎಂದು ಸಲಹೆ ನೀಡಿದರು.

ತಾಲೂಕಿನಲ್ಲಿ 1 ತಾಲೂಕು ಆರೋಗ್ಯ ಕೇಂದ್ರ, 2 ಸಮುದಾಯ ಆರೋಗ್ಯ ಕೇಂದ್ರ, 20 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಬಹುತೇಕ ವೈದ್ಯರು ಉನ್ನತ ವ್ಯಾಸಂಗಕ್ಕೆ ತೆರಳಿದ್ದಾರೆ. ವೈದ್ಯರು ಇಲ್ಲದೆ ಸಮಸ್ಯೆ

ಇದೆ. ಹಾಗಾಗಿ ಆರೋಗ್ಯ ಸೇವೆಯಲ್ಲಿ ಕೆಲಸ ಮಾಡುವವರು ಆದಷ್ಟು ತಾಳ್ಮೆಯಿಂದ ಕೆಲಸ ಮಾಡುವಂತೆ ತಿಳಿ ಹೇಳಿದರು.

ವೈದ್ಯಾಧಿಕಾರಿ ಡಾ. ಸೌಜನ್ಯ ಮಾತನಾಡಿ, ಕಿಕ್ಕೇರಿ ಹೋಬಳಿ ಕೇಂದ್ರವಾಗಿದ್ದು, ನಿತ್ಯ 150ಕ್ಕೂ ಹೆಚ್ಚು ರೋಗಿಗಳು ವಿವಿಧ ಆರೋಗ್ಯ ತಪಾಸಣೆಗೆ ಬರಲಿದ್ದು. ಸಿಬ್ಬಂದಿ ಕೊರತೆ ಇದ್ದರೂ ಸರಿದೂಗಿಸಿಕೊಂಡು ಹೋಗುತ್ತಿರುವುದಾಗಿ ತಿಳಿಸಿದರಲ್ಲದೇ, ಆಸ್ಪತ್ರೆಯಲ್ಲಿ ವಿವಿಧ ಸಮಸ್ಯೆಗಳನ್ನು ತೋಡಿಕೊಂಡರು.

ಗ್ರಾಪಂ ಅಧ್ಯಕ್ಷೆ ಭಾರತೀ ಪ್ರಕಾಶ್, ಕಾಯಿ ಮಂಜೇಗೌಡ, ಕೆ.ಜಿ. ಪುಟ್ಟರಾಜು, ಮಧು, ನೇತ್ರಾ, ಮುರುಳೀಧರ್, ಶೇಖರ್, ಮಲ್ಲೇಶ್, ಡಾ. ಸುಪ್ರೀತ್, ಡಾ. ಚಂದನ್, ಪಿಡಿಒ ಚಲುವರಾಜ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net