ವ್ಯಕ್ತಿ ಮೇಲೆ ಚಿರತೆ ದಾಳಿ

CTD CRIME--002
Published on

ಚಿತ್ರದುರ್ಗ:ಬಯಲು ಶೌಚಕ್ಕೆ ಹೋಗಿದ್ದ ವ್ಯಕ್ತಿ ಮೇಲೆ ಬುಧವಾರ ಮುಂಜಾನೆ ಚಿರತೆ ದಾಳಿ ನಡೆಸಿರುವ ಘಟನೆ ಮೊಳಕಾಲ್ಮೂರು ತಾಲೂಕು ಬೊಮ್ಮಲಿಂಗನಹಳ್ಳಿ ಬಳಿ ನಡೆದಿದೆ. ಶೌಚಕ್ಕೆ ತೆರಳಿದ್ದ ಬಸವರಾಜಪ್ಪ 55)ಚಿರತೆ ದಾಳಿಗೆ ಒಳಗಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಅ ವರನ್ನು ಮೊಳಕಾಲ್ಮೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ. ಮೊಳಕಾಲ್ಮೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net