ವ್ಯಕ್ತಿತ್ವ ರೂಪಿಸುವವರು ಶಿಕ್ಷಕರು

6 vikram 4
Published on

ಧಾರವಾಡ: ವಿದ್ಯಾರ್ಥಿಗಳ ಪರಿಪೂರ್ಣ ವ್ಯಕ್ತಿತ್ವ ರೂಪಿಸುವವರು ಶಿಕ್ಷಕರು. ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಬರುವ ಅಂಧಕಾರ ನಾಶ ಮಾಡುತ್ತಾರೆ. ಉತ್ತಮ ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಪ್ರತ್ಯಕ್ಷ ಗುರುಗಳಾಗಿರುತ್ತಾರೆ ಎಂದು ಎಸ್‌ಡಿಎಂ ವಿಶ್ವ ವಿದ್ಯಾಲಯದ ಉಪ ಕುಲಪತಿ ಡಾ. ನಿರಂಜನಕುಮಾರ ಹೇಳಿದರು.
ಸತ್ತೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಹಿರಿಯ ಶಿಕ್ಷಕರಾದ ಮೈಕ್ರೋಬಯಾಲಾಜಿ ವಿಭಾಗದ ಡಾ. ರಾಘವೇಂದ್ರ ಕುಲಕರ್ಣಿ, ದಂತ ವೈದ್ಯಕೀಯ ಕಾಲೇಜಿನ ಡಾ. ಕೃಷ್ಣ ಬುರಡೆ ಅವರಿಗೆ ಸನ್ಮಾನಿಸಲಾಯಿತು. ಎಸ್‌ಡಿಎಂಇ ಸೊಸೈಟಿ ಕಾರ್ಯದರ್ಶಿ ಜೀವಂದರಕುಮಾರ, ಪದ್ಮಲತಾ ನಿರಂಜನಕುಮಾರ, ಇತರರು ಇದ್ದರು.
ಸ್ಮರಣ್ ಕುಮಾರ್ ಜೈನ್ ಸ್ವಾಗತಿಸಿದರು. ಡಾ. ಪ್ರಿಯಾಂಕಾ ಮೋತಿ ನಿರೂಪಿಸಿದರು. ಶೀತಲ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net