ವ್ಯಕ್ತಿತ್ವ ವಿಕಸನ ನಿತ್ಯದ ಪ್ರಕ್ರಿಯೆಯಾಗಲಿ

e888fdc4-e1f1-47da-9148-1038c279f410
ಉಪನ್ಯಾಸಕ ಸಂಗಮೇಶ ಬ್ಯಾಳಿ ಮಾತನಾಡಿದರು.
Published on

ಬಾಗಲಕೋಟೆ: ವಿಧ್ಯಾರ್ಥಿಗಳು ತಮ್ಮ ಕೌಶಲ್ಯಗಳ ಮೂಲಕ ಮತ್ತೊಬ್ಬರನ್ನು ತಮ್ಮೆಡೆಗೆ ಆಕರ್ಷಿಸುವಂತಹ ವ್ಯಕ್ತಿತ್ವವನು ರೂಪಿಸಿಕೊಳ್ಳಬೇಕು, ವ್ಯಕ್ತಿತ್ವ ವಿಕಸನ ನಿತ್ಯದ ಪ್ರಕ್ರಿಯೆಯಾಗಲಿ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕ ಸಂಗಮೇಶ ಬ್ಯಾಳಿ ಹೇಳಿದರು.

ನಗರದ ಅಕ್ಕಮಹಾದೇವಿ ಮಹಿಳಾ ಕಲಾ,ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಐಕ್ಯೂ ಎಸಿ ಹಾಗೂ ಎನ್.ಎಸ್.ಎಸ್ ಘಟಕಗಳು ಹಾಗೂ ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು ಇವರ ಸಹಯೋಗದಲ್ಲಿ ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಸನ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವ್ಯಕ್ತಿತ್ವ ವಿಕಸನ ಎನ್ನುವುದು ನಿತ್ಯ ನಡೆಯುವಂತಹ ಪ್ರಕ್ರಿಯೆ, ಶಿಕ್ಷಣ, ಕ್ರೀಡೆ, ಚಿತ್ರಕಲೆ, ಸಂಗೀತ, ನಾಟಕ..ಹೀಗೆ ಪ್ರತಿ ಕ್ಷೇತ್ರದ ಚಟುವಟಿಕೆಯಲ್ಲೂ ನಿತ್ಯ ಭಾಗಿಯಾಗುವ ಮೂಲಕ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತಾ ಸಾಗಬೇಕು. ಆಗ ಮಾತ್ರ ಪರಿಪೂರ್ಣ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ, ಇಂತಹ ವ್ಯಕ್ತಿತ್ವ ವಿದ್ಯಾರ್ಥಿಗಳನ್ನು ಪ್ರತಿಯೊಬ್ಬರೂ ಪ್ರೀತಿಸುತ್ತಾರೆ, ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳಿಸಿಕೋಂಡರೆ ಜ್ಞಾನದ ಅರಿವೂ ಹೆಚ್ಚುತ್ತಾ ಹೋಗುತ್ತದೆ, ಎಲ್ಲರೂ ನಿತ್ಯ ಒಂದೊAದು ಗುಣಾತ್ಮಕ ಚಿಂತೆಯನ್ನು ಮೈಗೂಡಿಸಿಕೊಳ್ಳಬೇಕು, ಉತ್ತಮ ಆಲೋಚನೆಗಳಿಂದ ಜೀವನ ಯಾವುದೇ ಪರೀಕ್ಷೆಗಳನ್ನು ದೈರ್ಯವಾಗಿ ಎದುರಿಸಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀಮತಿ ಎಸ್ .ಜೆ. ಒಡೆಯರ ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಶಿಕ್ಷಣವೇ ಭದ್ರಬುನಾದಿಯಾಗಿದೆ ಇದು ಮನೆ ಹಾಗೂ ಪ್ರಾಥಮಿಕ ಹಂತದಲ್ಲಿಯೇ ಸುಭದ್ರವಾಗಿ ನಿರ್ಮಿಸಿದಾಗ ವಿದ್ಯಾರ್ಥಿಗಳ ಭವಿಷ್ಯ ಉತ್ತಮವಾಗುತ್ತದೆ ಕೆಲವೊಮ್ಮೆ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಸ್ಥೆಯಲ್ಲಿ ಕೊರತೆಯಾದಾಗ ಅಂತ ವಿದ್ಯಾರ್ಥಿಗಳು ಪ್ರೌಢಾವಸ್ಥೆಯಲ್ಲಿ ಬಂದಾಗ ಸ್ವಯಕ್ಷಣ ಅಧ್ಯಯನದ ಮೂಲಕವೂ ತಮ್ಮ ಬದುಕನ್ನು ನಿರ್ಮಿಸಿಕೊಳ್ಳಬಹುದು, ಶಿಕ್ಷಣವು ಬದುಕಿಗೆ ಬೆಳಕು ಅದರಲ್ಲೂ ಇಂದು ಸ್ಪರ್ಧಾತ್ಮಕ ಲೋಕದಲ್ಲಿ ಮಹಿಳೆಯು ಶೈಕ್ಷಣಿಕವಾಗಿ ಮುಂದೆ ಬಂದಾಗ ಮಾತ್ರ ಸಾಮಾಜಿಕ ಸಮಾನತೆಯನ್ನು ಕಾಣಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ಶ್ರೀಮತಿ ಪಿಕೆ ಚೌಗುಲಾ ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಎಂ ವಿ ಬಾಜಪ್ಪನವರ್ ಹಾಗೂ ಶ್ರೀ ಎಆರ್ ಬಡಿಗೇರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net