ವ್ಯಕ್ತಿತ್ವ ವಿಕಸನಗೊಳಿಸಲು ಶಾಲಾ ಹಂತದಲ್ಲೇ ಮುಂದಾಗಿ

ಚನ್ನರಾಯಪಟ್ಟಣದಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಸಬಾ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಗೆದ್ದ ತಂಡಗಳಿಗೆ ಗಣ್ಯರು ಬಹುಮಾನ ವಿತರಿಸಲಾಯಿತು. ಸಿ.ಎನ್.ಪುಟ್ಟಸ್ವಾಮಿಗೌಡ, ವಿ.ಜಿ.ದ್ಯಾವೇಗೌಡ, ಚಿಕ್ಕೇಗೌಡ, ಮಹಾದೇವ್, ಸಿ.ಎಂ.ಶಿವಣ್ಣ, ದೇವರಾಜೇಗೌಡ ಇತರರಿದ್ದರು.
ಫೋಟೋ ಶೀರ್ಷಿಕೆ 19 ಸಿಆರ್_ಪಿ-2 ಎ
Published on

ಚನ್ನರಾಯಪಟ್ಟಣ: ಮಕ್ಕಳು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿ ವ್ಯಕ್ತಿತ್ವ ವಿಕಸನಗೊಳಿಸಲು ಶಾಲಾ ಹಂತದಲ್ಲೇ ಮುಂದಾಗಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಎನ್.ಪುಟ್ಟಸ್ವಾಮಿಗೌಡ ಹೇಳಿದರು.


ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಮೇಗಲಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋದಲ್ಲಿ ಎರಡು ದಿನಗಳವರೆಗೆ ನಡೆದ 2023-24 ನೇ ಸಾಲಿನ ಕಸಬಾ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಸಮಾರೋಪ ಕಾರ್ಯಕ್ರಮದಲ್ಲಿ ಶನಿವಾರ ವಿಜೇತ ವಿದ್ಯಾರ್ಥಿಗಳು ಮತ್ತು ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.


ಮಕ್ಕಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕಲು ಮುಂದಾಗಬೇಕು. ಕ್ರೀಡೆ ಶೈಕ್ಷಣಿಕ ವ್ಯವಸ್ಥೆಯ ಅವಿಭಾಜ್ಯ ಅಂಗ. ಕ್ರೀಡೆಯಲ್ಲಿ ತೊಡಗುವುದರಿಂದ ಮಾನಸಿಕವಾಗಿ ಗಟ್ಟಿಯಾಗುವುದರೊಂದಿಗೆ ದೈಹಿಕ ಸದೃಢತೆ ಕಾಣಲು ಸಾಧ್ಯ ಎಂದರು.


ಚನ್ನರಾಯಪಟ್ಟಣ ತಾಲೂಕಿನಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಿದ್ದು, ಸೋದರ ಶಾಸಕ ಸಿ.ಎನ್.ಬಾಲಕೃಷ್ಣ ಅವರು ತಾಲೂಕಿನ ಪ್ರತಿ ಶಾಲೆಯಲ್ಲಿ ಮೂಲ ಸೌಲಭ್ಯ ಕಲ್ಪಿಸುವ ಮೂಲಕ ಶೈಕ್ಷಣಿಕ ವ್ಯವಸ್ಥೆಯನ್ನು ಗಟ್ಟಿಗೊಳಿಸಿದ್ದಾರೆ. ನರೇಗಾ ಯೋಜನೆಯಡಿ ಪ್ರತಿ ಹೋಬಳಿ ಮಟ್ಟದಲ್ಲಿ ಸುಸಜ್ಜಿತವಾದ ಕ್ರೀಡಾಂಗಣವನ್ನು ನಿರ್ಮಿಸಿ ಕ್ರೀಡೆಗೆ ಪ್ರೋತ್ಸಾಹಿಸಲಾಗಿದೆ ಎಂದರು.


ತಾಲೂಕು ಪಂಚಾಯಿತಿ ಇಒ ಜಿ.ಆರ್. ಹರೀಶ್ ಮಾತನಾಡಿ, ಕ್ರೀಡೆಯಲ್ಲಿ ತೊಡಗಿದವರಿಗೆ ಉತ್ತಮ ಭವಿಷ್ಯವಿದ್ದು, ಸತತ ಪರಿಶ್ರಮದ ಮೂಲಕ ಸಾಧನೆ ಸಾಧ್ಯ, ಕ್ರೀಡೆಯಲಿ ಸೋಲು, ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.


ಕ್ರೀಡಾಕೂಟದಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಗಣ್ಯರು ಪಾರಿತೊಷಕ ಮತ್ತು ಪ್ರಮಾಣಪತ್ರ ಗಣ್ಯರು ವಿತರಿಸಿದರು. ತಾಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ವಿ.ಜಿ.ದ್ಯಾವೇಗೌಡ, ಚಿಕ್ಕೇಗೌಡ, ತಾಲೂಕು ದೈಹಿಕ ಪರಿವೀಕ್ಷಕ ಮಹಾದೇವ್, ಕ್ರೀಡಾಕೂಟದ ಗೌರವ ಅಧ್ಯಕ್ಷ ಸಿ.ಎಂ.ಶಿವಣ್ಣ, ಅಧ್ಯಕ್ಷ ದೇವರಾಜೇಗೌಡ , ಕಾರ್ಯದರ್ಶಿ ರಂಗೇಗೌಡ, ಸಂಘಟನಾ ಕಾರ್ಯದರ್ಶಿ ಕೆ.ಎ.ಪ್ರಕಾಶ್, ಖಜಾಂಚಿ ನಾಗೇಂದ್ರಕುಮಾರ್ ಡಿ.ಬಿ.ಶಿಕ್ಷಕರ ಸಂಘದ ಪದಾಧಿಕಾರಿಗಳು, ವಿವಿಧ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net