

ಆಲೂರು: ಸಮಾಜದ ತಪ್ಪುಗಳನ್ನು ತಿದ್ದುವ ಮೂಲಕ ಅಭಿವೃದ್ಧಿಗೆ ಪೂರಕವಾಗುವ ರೀತಿಯಲ್ಲಿ ಪತ್ರಕರ್ತರು ಕಾರ್ಯ ನಿರ್ವಹಿಸಬೇಕೇ ಹೊರತು ವ್ಯಕ್ತಿಯ ಚಾರಿತ್ರ್ಯವಧೆ ಮಾಡಬಾರದು ಎಂದು ಹಿರಿಯ ಪತ್ರಕರ್ತ ಪಾ.ಹೈ. ಗುಲಾಂ ಸತ್ತಾರ್ ಹೇಳಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶನದಂತೆ ಆಲೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮನೆಯಂಗಳದಿ ಮನದುಂಬಿ ಕಾರ್ಯಕ್ರಮದಲ್ಲಿ ಗೌರವ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ಸಮಾಜದಲ್ಲಿ ಪತ್ರಕರ್ತರ ಪಾತ್ರ ಮತ್ತು ಜವಾಬ್ದಾರಿ ದೊಡ್ಡದು. ಸಂವಿಧಾನದ ನಾಲ್ಕನೇ ಅಂಗವಾಗಿ ಪತ್ರಿಕಾ ರಂಗವನ್ನು ಗುರುತಿಸಲಾಗಿದ್ದು, ಸಮಾಜದಲ್ಲಿನ ವ್ಯತ್ಯಾಸಗಳನ್ನು ಹುಡುಕಿ ಜನರಿಗೆ ಮನವರಿಕೆ ಮಾಡುವ ಕೆಲಸ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗ ಶಾಶ್ವತವಾಗಿರಬೇಕು ಎಂದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪೃಥ್ವಿ ಜಯರಾಮ್, ಉಪಾಧ್ಯಕ್ಷ ಪ್ರದೀಪ್, ಖಜಾಂಚಿ ನವೀನ್, ಕಾರ್ಯದರ್ಶಿಗಳಾದ ಸತೀಶ್ ಚಿಕ್ಕಕಣಗಾಲು, ರುದ್ರೇಶ್, ಮಾಜಿ ಅಧ್ಯಕ್ಷರಾದ ಎಚ್.ವಿ.ರಾಘವೇಂದ್ರ, ನಟರಾಜ್ ನಾಕಲಗೂಡು, ಪತ್ರಕರ್ತರಾದ ಸಲೀಂ ಪಾಷ, ವೀರಭದ್ರಸ್ವಾಮಿ, ಪ್ರದೀಪ್‌ಕುಮಾರ್, ಮಂಜುನಾಥ್ ಮುಂತಾದವರು ಹಾಜರಿದ್ದರು.