ವ್ಯವಸ್ಥೆ ಸರಿಪಡಿಸದಿದ್ದರೆ ಕ್ರಮ

24 ckm 2
ಚಿಕ್ಕಮಗಳೂರು ಹೊರವಲಯದಲ್ಲಿರುವ ಇಂದಾವರದ ಕಸ ವಿಲೇವಾರಿ ಘಟಕಕ್ಕೆ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Published on

ಚಿಕ್ಕಮಗಳೂರು: ಇಂದಾವರದಲ್ಲಿರುವ ಕಸ ವಿಲೇವಾರಿ ಘಟಕ ಅವ್ಯವಸ್ಥೆಯಿಂದ ಕೂಡಿದ್ದು, ಇದರಿಂದ ಅಕ್ಕಪಕ್ಕದ ಗ್ರಾಮಗಳ ಜನರಿಗೆ ಸಮಸ್ಯೆಯುಂಟಾಗುತ್ತಿದೆ. ಇದಕ್ಕೆ ಸಂಬAಧಿಸಿದAತೆ ಲೋಕಾಯುಕ್ತದಲ್ಲಿ ಸುಮೋಟ ಪ್ರಕರಣ ದಾಖಲಿಸಿಕೊಳ್ಳುತ್ತೇವೆ. ಮುಂದಿನ ದಿನಗಳಲ್ಲಿಯೂ ವ್ಯವಸ್ಥೆ ಸರಿಪಡಿಸದೇ ಇದ್ದಲ್ಲಿ ಸಂಬAಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬುಧವಾರ ಬೆಳ್ಳಂಬೆಳಗ್ಗೆ ನಗರದ ಹೊರವಲಯದಲ್ಲಿರುವ ಇಂದಾವರದಲ್ಲಿನ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ವ್ಯವಸ್ಥೆ ಗಮನಿಸಿ ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಇದೇ ವೇಳೆ ಇಂದಾವರ ಸೇರಿದಂತೆ ಅಕ್ಕಪಕ್ಕದ ಗ್ರಾಮದ ನಿವಾಸಿಗಳು ಕಸ ವಿಲೇವಾರಿ ಘಟಕದಿಂದಾಗಿ ಕೊಳಚೆ ನೀರು ಗ್ರಾಮಗಳ ಚರಂಡಿಯಲ್ಲಿ ಹರಿಯುತ್ತಿದೆ. ಇದರಿಂದ ಗ್ರಾಮಗಳೇ ದುರ್ವಾಸನೆಯಿಂದ ಕೂಡಿವೆ. ಈ ಸಮಸ್ಯೆಯಿಂದ ತಮಗೆ ಮುಕ್ತಿ ನೀಡುವಂತೆ ಮನವಿ ಮಾಡಿದರು.

ಇದರಿಂದ ಸಿಟ್ಟಿಗೆದ್ದ ಉಪಲೋಕಾಯುಕ್ತರು ಕಸ ವಿಲೇವಾರಿ ಘಟಕದ ಕೊಳಚೆ ನೀರು ಸಂಗ್ರಹ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆಯೇ ಎಂದು ನಗರಸಭೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಆಗ ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಅವರು ವ್ಯವಸ್ಥೆ ಮಾಡಿಕೊಂಡಿರುವುದಾಗಿ ತಿಳಿಸಿದರು. ಆಗ ಮಧ್ಯ ಪ್ರವೇಶಿಸಿದ ಇಂದಾವರದ ಗ್ರಾಮಸ್ಥರು ಘಟಕದ ಮೇಲ್ಬಾಗದಲ್ಲಿ ಕೊಳಚೆ ನೀರು ಸಂಗ್ರಹಕ್ಕೆ ಗುಂಡಿ ಮಾಡಿಕೊಂಡಿದ್ದಾರೆ. ಆದರೆ ಕೊಳಚೆ ನೀರು ಕೆಳಭಾಗದಲ್ಲಿ ಹರಿಯುತ್ತಿದೆ. ಇಲ್ಲಿ ಯಾವುದೇ ಕೊಳಚೆ ಸಮಸ್ಯೆ ಇಲ್ಲ ಎಂದು ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ಕಸ ವಿಲೇವಾರಿ ಘಟಕದ ಸಮಸ್ಯೆಗಳನ್ನು ಅರಿಯಲು ಬೆಂಗಳೂರಿನಿAದಲೇ ಕೊಳಚೆ ನಿರ್ಮೂಲನಾ ಮಂಡಳಿ ಹಾಗೂ ಇತರೆ ಇಲಾಖೆ ಅಧಿಕಾರಿಗಳ ತಂಡವನ್ನು ಕಳುಹಿಸುತ್ತೇವೆ. ಅವರ ಇಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ನಮಗೆ ವರದಿ ನೀಡುತ್ತಾರೆ. ಕೂಡಲೇ ಇಲ್ಲಿನ ಸಮಸ್ಯೆ ಪರಿಹರಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಒಂದು ವೇಳೆ ಸಮಸ್ಯೆ ಪರಿಹರಿಸದೇ ಇದ್ದಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಗ್ರಾಮಸ್ಥರಿಗೆ ಉಪಲೋಕಾಯುಕ್ತರು ನೀಡಿದರು.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡು ಬದಿ ಕಸ ವಿಲೇವಾರಿಗೆ ಕ್ರಮವಹಿಸಲಾಗಿದೆ. ಅದೇ ಮಾದರಿಯಲ್ಲಿ ಚಿಕ್ಕಮಗಳೂರಿನಲ್ಲಿಯೂ ಕೊಳೆಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ಮಾಡಿ ಕೊಳಚೆ ನೀರನ್ನು ಶುದ್ಧೀಕರಿಸಿ ಕುಡಿಯುವ ನೀರನ್ನು ಹೊರತುಪಡಿಸಿ ತೋಟಗಾರಿಕೆಗೆ, ಕೃಷಿಗೆ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಗರ ಹಾಗೂ ಗ್ರಾಮೀಣ ಸಾರಿಗೆ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಶೌಚಗೃಹಗಳ ಅಸ್ವಚ್ಛತೆ, ಬಸ್ ನಿಲ್ದಾಣದ ಆವರಣದಲ್ಲಿನ ಕ್ಯಾಂಟೀನ್ ಅಡುಗೆ ಮನೆಯಲ್ಲಿ ಸ್ವಚ್ಛತೆ ಇಲ್ಲದಿರುವುದನ್ನು ಗಮನಿಸಿ ಪ್ರತಿದಿನ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.

ಸುಮಾರು ೧೯ ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ರಸ್ತೆ ಸಾರಿಗೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಅಲ್ಲಿಯವರೆಗೆ ಒಂದು ಬೋರ್‌ವೆಲ್ ತೆಗೆಸಿ ನೀರಿನ ಸಮಸ್ಯೆ ಪರಿಹರಿಸಬೇಕು. ಬಸ್ ನಿಲ್ದಾಣದಲ್ಲಿ ನೀರು ನಿಲ್ಲದಂತೆ ಜಲ್ಲಿಯನ್ನು ಹಾಕಿ ಎತ್ತರ ಮಾಡಿ ನೀರು ಒಂದೆಡೆ ಕಾಲುವೆಗೆ ಹರಿಯುವಂತೆ ಕ್ರಮಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಎಂ ಪಾಟೀಲ್, ಅಪರ ನಿಬಂಧಕರಾದ ಪೃಥ್ವಿರಾಜ್ ವರ್ಣೀಕರ್, ಶಿವಾಜಿ ಅನಂತ್ ನಲ್ಪಾಡೆ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ, ಜಿಲ್ಲಾಧಿಕಾರಿ ಸಿ.ಎನ್ ಮೀನಾನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನ, ಎಸ್‌ಪಿ ವಿಕ್ರಮ ಅಮಟೆ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net