ವ್ಯಸನಮುಕ್ತ ಸಮಾಜ ನಿರ್ಮಾಣ ಗುರಿಯಾಗಲಿ

Let the goal be to build an addiction-free society
ವಿಜಯಪುರದ ಗಾಂಧಿ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ. ಮಹಾಂತ ಶಿವಯೋಗಿಗಳ ಜನ್ಮದಿನ ಹಿನ್ನೆಲೆಯಲ್ಲಿ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಅಪರ ಡಿಸಿ ಮಹಾದೇವ ಮುರುಗಿ ಪುಷ್ಪನಮನ ಸಲ್ಲಿಸಿದರು. ಜಿಲ್ಲಾ ಮಾನಸಿಕ ಆರೋಗ್ಯ ಘಟಕದ ಮನೋರೋಗ ತಜ್ಞ ಡಾ. ಮಂಜುನಾಥ ಮಸಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ. ಚವ್ಹಾಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಇದ್ದರು.
Published on

ವಿಜಯಪುರ: ಕಾಲ್ನಡಿಗೆಯಲ್ಲಿ ಎಲ್ಲೆಡೆ ಸುತ್ತಿ ಜನರನ್ನು ದುಶ್ಚಟಗಳಿಂದ ಮುಕ್ತಗೊಳಿಸಲು ಡಾ. ಮಹಾಂತ ಶಿವಯೋಗಿಗಳು ಶ್ರಮಿಸಿದ್ದರು. ಹೀಗಾಗಿ ಆ. 1ರಂದು ವ್ಯಸನಮುಕ್ತ ದಿನವನ್ನಾಗಿ ಸರ್ಕಾರ ಆಚರಿಸುತ್ತಿದೆ. ಇಂಥ ಆಚರಣೆಗಳ ಮೂಲಕ ಸಂತ-ಮಹಾಂತರ ತತ್ವಾದರ್ಶನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.

ಡಾ. ಮಹಾಂತ ಶಿವಯೋಗಿಗಳ ಜನ್ಮದಿನ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮಂಗಳವಾರ ಗಾಂಧಿಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿಯಾಗಿದೆ. ಮಾದಕವೆಂಬ ವಿಷ ಮನುಕುಲದಲ್ಲಿ ಯುವ ಸಮುದಾಯ ನಲುಗುತ್ತಿದೆ. ವ್ಯಸನಕ್ಕೆ ಒಳಗಾಗಿ ಸುಂದರ ಬದುಕು ವ್ಯರ್ಥಮಾಡಿಕೊಳ್ಳದೇ ಸುಂದರ ಬದುಕು ರೂಪಿಸುವತ್ತ ಯುವ ಜನಾಂಗ ಮುಂದಾಗಬೇಕು ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಘಟಕದ ಮನೋರೋಗ ತಜ್ಞ ಡಾ. ಮಂಜುನಾಥ ಮಸಳಿ ಮಾತನಾಡಿ, ವ್ಯಸನ ಮುಕ್ತ ಜೀವನ ನಡೆಸುವುದರಿಂದ ಸಾಧನೆ ಮಾಡಲು ಸಾಧ್ಯ. ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು, ನಿರಂತರ ಯೋಗ, ಧ್ಯಾನ, ವ್ಯಾಯಾಮಗಳನ್ನು ಮಾಡಿ ದೇಹವನ್ನು ಆರೋಗ್ಯವಂತಾಗಿಡಬೇಕು ಎಂದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ರಾಜಶೇಖರ ದೈವಾಡಿ ಮಾತನಾಡಿ, ಶಿಸ್ತು, ಪ್ರಾಮಾಣಿಕತೆ, ಸುಗುಣಶೀಲತೆ, ಸತತ ಪ್ರಯತ್ನ, ನಿರಂತರ ಓದು ಹಾಗೂ ಗುರುಭಕ್ತಿ ಜೀವನದಲ್ಲಿ ಇಂದಿನ ಪೀಳಿಗೆ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ. ಚವ್ಹಾಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಜಿ.ಪಂ. ಸಹಾಯಕ ಕಾರ್ಯದರ್ಶಿ ಅನುಸೂಯ ಚಲವಾದಿ, ನಿವೃತ್ತ ಶಿಕ್ಷಕ ಹುಮಾಯೂನ ಮಮದಾಪುರ, ಜಗಜ್ಯೋತಿ ಬಸವೇಶ್ವರ ಪದವಿಪೂರ್ವ ಕಾಲೇಜ್ ಉಪನ್ಯಾಸಕ ಶೇಬಾನಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net