ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕರೆ

02
Published on

ಸುರಪುರ : ಯುವ ಸಮೂಹದಿಂದ ಮಾತ್ರ ವ್ಯಸನಮುಕ್ತ ಸಮಾಜ ನಿರ್ಮಿಸಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಸಂಯೋಜಕ ಸಂತೋಷ ಕುಮಾರ ಹೇಳಿದರು.

ನಗರದ ರಂಗAಪೇಟೆ ಬಸವೇಶ್ವರ ಮಹಾವಿದ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗುರುವಾರ ಹಮ್ಮಿಕೊಂಡ ಸ್ವಾಸ್ಥö್ಯ ಸಂಕಲ್ಪ ಕರ‍್ಯಕ್ರಮದಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಯುವಕರು ವ್ಯಸನಿಗಳನ್ನು ತಿದ್ದುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಇಲಕಲ್ ಮಹಾಂತ ಶಿವಯೋಗಿಗಳ ಜನ್ಮದಿನ ನಿಮಿತ್ತ ವ್ಯಸನಮುಕ್ತ ಸಮಾಜ ಕಟ್ಟುವ ದೃಷ್ಟಿಯಿಂದ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಆಯೋಜಿಸಲಾಗುತ್ತಿದೆ. ಎಲ್ಲ ವಿದ್ಯಾರ್ಥಿಗಳು ಧೂಮಪಾನ, ಮದ್ಯಪಾನಕ್ಕೆ ದಾಸರಾಗದೆ ಒಳ್ಳೆಯ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿದರು. ಪ್ರಾಚಾರ್ಯ ವೀರೇಶ ಹಳಿಮನಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ರುದ್ರಪ್ಪ ಕೆಂಭಾವಿ, ವೆಂಕಟೇಶ ದೇವಿಕೇರಾ, ಶ್ರೀಕಾಂತ ರತ್ತಾಳ ಇದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಮಂಗಲಾ ಸ್ವಾಗತಿಸಿದರು. ಉಪನ್ಯಾಸಕಿ ಶ್ರುತಿ ಹಿರೇಮಠ ನಿರೂಪಣೆ ಮಾಡಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net