

ಮೈಸೂರು: ವ್ಹೀಲಿಂಗ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೆಳವಾಡಿಯ ಜೀವನ್‌ನನ್ನು ಕೆ.ಆರ್.ಸಂಚಾರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ನಾಲ್ಕು ಬಾರಿ ವ್ಹೀಲಿಂಗ್ ಮಾಡಲು ಹೋಗಿ ಬಿದ್ದು ಕಾಲು ಕೂಡ ಮುರಿದುಕೊಂಡಿದ್ದರೂ ಬುದ್ಧಿ ಕಲಿಯದ ಜೀವನ್ ಮತ್ತೆ ಅದೇ ಚಾಳಿ ಮುಂದುವರಿಸಿದ್ದನೆನ್ನಲಾಗಿದೆ. ಇತ್ತೀಚೆಗೆ ಬೋಗಾದಿ ರಿಂಗ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದಾಗ ಪೊಲೀಸರು ಬಂಧಿಸಿ ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.