ಶಂಕರಾಚಾರ್ಯರ ಜಯಂತಿ ಸರಳ ಆಚರಣೆ

28 vikram 3
Published on

ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಮಂಗಳವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪಣೆ ಮಾಡುವ ಮೂಲಕ ಸರಳ ಆಚರಣೆಗೆ ಚಾಲನೆ ನೀಡಿದರು. ಜಿಲ್ಲಾಧಿಕಾರಿ ದೀಪಾ ಚೋಳನ್, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಸಮಾಜದ ಮುಖಂಡರಾದ ಆರ್.ಡಿ. ಕುಲಕರ್ಣಿ, ರಾಜೀವ ಪಾಟೀಲ ಕುಲಕರ್ಣಿ, ಎಸ್.ಎಂ. ದೇಶಪಾಂಡೆ, ಎಂ.ಎನ್. ಧಾರವಾಡಕರ, ರಂಗಣ್ಣ ಕುಲಕರ್ಣಿ, ಅರವಿಂದ ಮಾಮಲೆದೇಸಾಯಿ, ವಿನಾಯಕ ಜೋಶಿ, ಪಾಲಿಕೆ ಮಾಜಿ ಸದಸ್ಯರಾದ ಪ್ರಕಾಶ ಗೋಡಬೋಲೆ, ವಿಜಯಾನಂದ ಶೆಟ್ಟಿ, ಸಂಜಯ ಕಪಟಕರ, ಇತರರಿದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net