ಶಂಖಮ್ಮ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

11HDK1
ಎಚ್.ಡಿ.ಕೋಟೆ ತಾಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಆಂದೋಲನ ಕಾರ್ಯಕ್ರಮದಲ್ಲಿ ಎಂ.ಲಕ್ಷ್ಮಣ್, ಎಂ.ಶಶಿಧರ್, ಅಶ್ವಿನಿ, ಭಾಗ್ಯಮ್ಮ ಇತರರಿದ್ದರು.
Published on

ಎಚ್.ಡಿ.ಕೋಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿರುವ ಶಂಖಮ್ಮ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಯೋಜನೆಯ ಮೈಸೂರು ಜಿಲ್ಲಾ ನಿರ್ದೇಶಕ ಎಂ.ಲಕ್ಷಣ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಗ್ರಾಮಗಳ ದೇವಸ್ಥಾನಗಳನ್ನು ನಾವೇ ಶುಚಿಯಾಗಿಡಬೇಕು ಎಂಬ ಉದ್ದೇಶದಿಂದ ರಾಜ್ಯಾದ್ಯಂತ ಸಂಕ್ರಾಂತಿ ಹಬ್ಬದ ಪ್ರಯುಕ್ತ ಎಲ್ಲ ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ತಾಲೂಕಿನಲ್ಲಿ 70 ದೇವಸ್ಥಾನಗಳ ಸ್ವಚ್ಛತೆ ಮಾಡಲಾಗಿದೆ ಎಂದು ತಿಳಿಸಿದರು.

ತಾಲೂಕು ಯೋಜನಾಧಿಕಾರಿ ಶಶಿಧರ್, ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಎಚ್.ಜಿ.ಅಶ್ವಿನಿ, ಸೇವಾಪ್ರತಿನಿಧಿ ಭಾಗ್ಯಮ್ಮ, ಶಂಖಮ್ಮ ಜ್ಞಾನವಿಕಾಸ ಸದಸ್ಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net