ಶಕ್ತಿ ಯೋಜನೆಗೆ ಶಾಸಕ ದರ್ಶನ್ ಚಾಲನೆ

11NGD2
ನಂಜನಗೂಡಿನಲ್ಲಿ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ಮುಂದಾದ ಮಹಿಳೆಯರಿಗೆ ಶಾಸಕ ದರ್ಶನ್ ಧ್ರುವನಾರಾಯಣ ಉಚಿತ ಟಿಕೆಟ್ ನೀಡಿದರು.
Published on

ನಂಜನಗೂಡು: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ಶಕ್ತಿ ಯೋಜನೆಗೆ ಶಾಸಕ ದರ್ಶನ್ ಧ್ರುವನಾರಾಯಣ ಭಾನುವಾರ ಚಾಲನೆ ನೀಡಿದರು.

ನಗರದ ಹಳೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಉಚಿತ ಸೇವೆ ನೀಡುವ ಬಸ್‌ಗಳಲ್ಲಿ ಟೇಪ್ ಕತ್ತರಿಸುವ ಮೂಲಕ ಉಚಿತ ಪ್ರಯಾಣಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭ ಮಹಿಳೆಯರಿಗೆ ಬಸ್ ಟಿಕೆಟ್ ಉಚಿತವಾಗಿ ನೀಡುವ ಮೂಲಕ ಗಮನ ಸೆಳೆದರು.

ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಏಕಕಾಲದಲ್ಲಿ ರಾಜ್ಯದಲ್ಲಿ ಜಾರಿಯಾಗಿದೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಈ ಯೋಜನೆ ಜಾರಿಗೆ ತಂದಿದೆ. ಆ ಮೂಲಕ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ಮಹಿಳೆಯರು ಗ್ರಾಮೀಣ ಭಾಗದಿಂದ ಪಟ್ಟಣ, ಜಿಲ್ಲಾ ಹಾಗೂ ದೂರದ ಊರುಗಳ ಪ್ರಯಾಣಕ್ಕೆ ಇನ್ನು ಮುಂದೆ ಉಚಿತವಾಗಿ ಸಂಚರಿಸಬಹುದಾಗಿದೆ. ಈ ಯೋಜನೆಯಡಿ ಮಹಿಳೆಯರಿಗೆ ಯಾವುದೇ ಅಡಚಣೆಯಾಗದಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ನೋಡಿಕೊಳ್ಳುವಂತೆ ವಿನಂತಿಸಿಕೊಳ್ಳುತ್ತೇನೆ. ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಲು ಮಹಿಳೆಯರು ಆನ್‌ಲೈನ್ ಅರ್ಜಿ ಹಾಕುವಂತೆ ಮನವಿ ಮಾಡಿದರು.

ಮಾಜಿ ಶಾಸಕ ಕಳಲೆ ಎನ್.ಕೇಶವಮೂರ್ತಿ, ತಹಸೀಲ್ದಾರ್ ಶಿವಕುಮಾರ್, ಡಿಪೋ ವ್ಯವಸ್ಥಾಪಕ ಶಂಕರ್, ನಗರಸಭಾ ಸದಸ್ಯೆ ಮಂಗಳಮ್ಮ ಸೇರಿದಂತೆ ಹಲವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net