ಶಕ್ತಿದೇವತೆಗಳಿಗೆ ವಿಶೇಷಾಲಂಕಾರ

Kanivemarammadevi
Published on

ಚಿತ್ರದುರ್ಗ: ನವರಾತ್ರಿಯ ಮೊದಲ ದಿನ ಭಾನುವಾರ ಶೈಲಾ ಪುತ್ರಿಯ ಆರಾಧನೆಯೊಂದಿಗೆ ಜಿಲ್ಲೆಯ ಹಲವು ಶಕ್ತಿದೇವತೆಗಳ ದೇಗುಲಗಳಲ್ಲಿ ಮಹೋತ್ಸವಕ್ಕೆ ಚಾಲನೆ ದೊರೆಯಿತು.

ದುರ್ಗದ ಅಧಿದೇವತೆ ಏಕನಾಥೇಶ್ವರಿ ದೇವಿಗೆ ಹೂವಿನ ಹಾರಗಳಿಂದ, ನಗರದೇವತೆ ಉಚ್ಚಂಗಿಯಲ್ಲಮ್ಮ ದೇವಿಗೆ ಸಾವಿರಾರು ಎಲೆಗಳಿಂದ, ನಗರ ಪೊಲೀಸ್ ಠಾಣೆ ಆವರಣದ ಕಣಿವೆಮಾರಮ್ಮ, ಜೋಗಿಮಟ್ಟಿ ರಸ್ತೆಯ ತ್ರಿಪುರಸುಂದರಿ ತಿಪ್ಪಿನಘಟ್ಟಮ್ಮ ದೇವಿಗೆ ಸಾವಿರಾರು ಬಟನ್ಸ್, ಸೇವಂತಿ ಹೂಗಳಿಂದ ವಿಶೇಷ ಅಲಂಕಾರ ಸೇವೆ, ಪೂಜೆಗಳು ನೆರವೇರಿದವು. ಅನೇಕ ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸಿ, ಇಷ್ಟಾರ್ಥ ಈಡೇರಿಕೆಗೆ ಪ್ರಾರ್ಥಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net