ಶಣವಿನಕುಪ್ಪೆ ಗ್ರಾಮದಲ್ಲಿ ಬಸವ ಜಯಂತಿ ಆಚರಣೆ

2ark4
Published on

ಅರಕಲಗೂಡು: ತಾಲೂಕಿನ ಶಣವಿನಕುಪ್ಪೆ ಗ್ರಾಮದಲ್ಲಿ ಇತ್ತೀಚೆಗೆ ಬಸವ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.

ಸಂತೆಮರೂರು ಗ್ರಾಪಂ ಸದಸ್ಯ ಸಂತೋಷ್ ಮಾತನಾಡಿ, ಸಮ ಸಮಾಜದ ಕನಸು ನನಸಾಗಿಸಲು ಜಾತಿರಹಿತವಾಗಿ ಸಾಮಾಜಿಕ ಅಸಮಾನತೆಗಳನ್ನು ತೊಡೆದು ಹಾಕಲು ಶ್ರಮಿಸಿದ ಬಸವಣ್ಣನವರು ಜಗತ್ತು ಕಂಡ ಮೊದಲ ಮಹಾನ್ ದಾರ್ಶನಿಕ ಎಂದರು. ಬಸವೇಶ್ವರರ ಭಾವಚಿತ್ರಕ್ಕೆ ಗ್ರಾಮಸ್ಥರು ಪುಷ್ಪಾರ್ಚನೆ ಮಾಡಿದರು. ಸಾಮೂಹಿಕ ಅನ್ನಸಂತರ್ಪಣೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net