ಶನಿವಾರ ಅಮೃತ ಮಹೋತ್ಸವ

8Athni2
????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಅಥಣಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಘಟನಾ ಕಾರ್ಯನಿರ್ವಾಹಕರಾಗಿ ಸೇವೆ ಸಲ್ಲಿಸಿದ ಹಿರಿಯ ಸಮಾಜ ಸೇವಕ ಅರವಿಂದರಾವ ದೇಶಪಾಂಡೆ ಅವರ ೭೫ನೇ ವರ್ಷದ ಅಮೃತ ಮಹೋತ್ಸವ ಏ.೧೨ರಂದು ಸಂಜೆ ೫ ಗಂಟೆಗೆ ಜೆ.ಎ.ಪದವಿಪೂರ್ವ ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಸೇವಕ ಗಜಾನನ ಮಂಗಸೂಳಿ ತಿಳಿಸಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ೧೦೦ ವರ್ಷದ ಜೆ.ಎ.ಶಿಕ್ಷಣ ಸಂಸ್ಥೆ ಪ್ರಗತಿ ಪಥದಲ್ಲಿ ಸಾಗಿಸಲು ಶ್ರಮಿಸಿದ ಅರವಿಂದ ದೇಶಪಾಂಡೆ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಲು ಎಲ್ಲರೂ ಕಂಕಣಬದ್ಧರಾಗಿದ್ದಾರೆ ಎಂದರು.

ಕೊಲ್ಲಾಪುರ ಕನ್ಹೇರಿಮಠದ ಅದೃಶ್ಯಕಾಡಸಿದ್ಧೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಿಲ್ಪಿ ಡಾ.ಅರುಣ ಯೋಗಿರಾಜ ಮುಖ್ಯ ಅಥಿತಿಗಳಾಗಿ ಆಗಮಿಸುವರು. ವಿಮೋಚನಾ ಸಂಘದ ಅಧ್ಯಕ್ಷ ಬಿ.ಎಲ್.ಪಾಟೀಲ ಅಧ್ಯಕ್ಷತೆ ವಹಿಸುವರು. ನಾಗಪುರದ ಆರ್‌ಎಸ್‌ಎಸ್ ಅಖಿಲ ಭಾರತೀಯ ಕಾರ್ಯಕಾರಣಿ ಸದಸ್ಯ ಸುರೇಶ ಜೋಶಿ ಸವ್ಯಸಾಚಿ ಗ್ರಂಥ ಬಿಡುಗಡೆಗೊಳಿಸುವರು. ಜೆ.ಎ.ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ರಾಮ ಕುಲಕರ್ಣಿ, ಸವ್ಯಸಾಚಿ ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ ಬಿ.ಎಲ್.ಪಾಟೀಲ ಮಾತನಾಡಿದರು.

ಅನಿಲ ದೇಶಪಾಂಡೆ, ಎಸ್.ಎಂ.ಜೋಶಿ, ಎಂ.ಪಿ.ಮೇತ್ರಿ, ರಾಜೇಂದ್ರ ದೇವರೆಡ್ಡಿ, ಎಸ್.ವಿ.ದಾತಾರ, ಗೌರವ ಭಾಟೆ, ಎಸ್.ಬಿ.ಜೇರೆ, ಗಿರೀಶ ಕುಲಕರ್ಣಿ, ಮಕರಂದ ನಾಯಿಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net