

ಹಾಸನ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯ ಸಮಿತಿ ಮತ್ತು ಜಿಲ್ಲಾ ಸಮಿತಿ ವತಿಯಿಂದ ಮಾರ್ಚ್ 15ರ ಶನಿವಾರ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ರಾಜ್ಯಮಟ್ಟದ ಪದಾಧಿಕಾರಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಸಂಘಟಿತ ಕಾರ್ಮಿಕರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಕುಪೇಂದ್ರ ಆಯನೂರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯಸಭಾ ಸದಸ್ಯರಾದ ಎಚ್.ಡಿ.ದೇವೇಗೌಡರು ಉಪಸ್ಥಿತರಿರಲಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಭಾಗವಹಿಸಲಿದ್ದಾರೆ. ಕಾರ್ಮಿಕ ಕಾರ್ಡುಗಳ ವಿತರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಅಸಂಘಟಿತ ಕಾರ್ಮಿಕ ಸಂಘದ ರಾಜ್ಯಾಧ್ಯಕ್ಷ ಪ್ರದೀಪ್ ಹೊನ್ನಪ್ಪ ವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ, ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ, ಶಿವಮೊಗ್ಗ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಕುಮಾರ್, ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಸ್.ರಂಗಸ್ವಾಮಿ, ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಶಿಕ್ಷಣ ಮತ್ತು ತರಬೇತಿ ಕೇಂದ್ರದ ಅಧ್ಯಕ್ಷ ಹರ್ಷ ಭಾಸ್ಕರ್ ಕಾಮತ್, ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಕುಪೇಂದ್ರ ಆಯನೂರು ಮತ್ತು ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷ, ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಮಹೇಶ್ ಪೇಟ್ಕರ್ ಭಾಗವಹಿಸಲಿದ್ದಾರೆ ಎಂದರು.
ಸಮಾರೋಪ ಸಮಾರಂಭದಲ್ಲಿ ಮಾಜಿ ಸಂಸದರು, ರಾಜ್ಯ ಮತ್ತು ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ್, ಹಾಗೂ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಕಾರ್ಯಾಧ್ಯಕ್ಷೆ ರತ್ನಮಾಲಾ ಸುರೇಶ್ ಮೂಳೆ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ, ವಿಧಾನ ಪರಿಷತ್ ಶಾಸಕ ಸೂರಜ್ ರೇವಣ್ಣ, ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ.ಸುರೇಶ್, ಅರಕಲಗೂಡು ಶಾಸಕ ಎ.ಮಂಜು, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಶಾಸಕ ಮಧು ಜಿ ಮಾದೇಗೌಡ, ನಗರ ಸಭೆಯ ಅಧ್ಯಕ್ಷ ಚಂದ್ರೇಗೌಡ ಎಂ, ಶಾಸಕ ಕೆ.ವಿವೇಕಾನಂದ, ಮಾಜಿ ಶಾಸಕ ಪ್ರೀತಂ ಜೆ ಗೌಡ, ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಹಾಸನ ನಗರಾಧ್ಯಕ್ಷ ಟಿ.ಮಹೇಶ್, ಹಾಸನ ಗ್ರಾಮಾಂತರ ಅಧ್ಯಕ್ಷ ವೆಂಕಟೇಶ್, ಹಾಸನ ಜಿಲ್ಲಾ ಉಪಾಧ್ಯಕ್ಷ ಸಗೀರ್ ಆಹಮದ್, ಮುಖ್ಯ ಅತಿಥಿಗಳಾಗಿ ಹಾಸನ ವಿಭಾಗ ಸಹಾಯಕ ಕಾರ್ಮಿಕ ಆಯುಕ್ತೆ ಯಮುನಾ ಉಪಸ್ಥಿತರಿರಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಪ್ರದೀಪ್ ಹೊನ್ನಪ್ಪ, ರಾಜ್ಯ ಉಪಾಧ್ಯಕ್ಷ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಮಹೇಶ್ ಪೇಟ್ಕರ್, ಜಿಲ್ಲಾಧ್ಯಕ್ಷ ಎಸ್.ಎಸ್.ರಂಗಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಸಗೀರ್ ಅಹಮದ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಇತರರು ಉಪಸ್ಥಿತರಿದ್ದರು.