

ಹಾಸನ: ಜಿಲ್ಲಾಡಳಿತದಿಂದ ಏ.5 ರಂದು ಡಾ.ಬಾಬು ಜಗಜೀವನರಾಂ ಅವರ 118ನೇ ಜನ್ಮ ದಿನಾಚರಣೆಯನ್ನು ಹಾಸನ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದೆ. ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ಮೆರವಣಿಗೆ ಹೊರಟು ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ಡಾ.ಬಿ.ಆರ್ ಅಂಬೇಡ್ಕರ್ ಭವನಕ್ಕೆ ಆಗಮಿಸಲಾಗುವುದು. ಜನಪ್ರತಿನಿಧಿಗಳು, ಗಣ್ಯರು, ಪ.ಜಾತಿ/ವರ್ಗದ ಸಂಘಟನೆಗಳ, ಇತರೆ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.