ಶನಿವಾರ, ಭಾನುವಾರ ಸಂಪೂರ್ಣ ಲಾಕ್‌ಡೌನ್

lock
Published on

ಬೆಳಗಾವಿ: ಕರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಹಾಗೂ ಸಾರ್ವಜನಿಕರ ಆರೋಗ್ಯ, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾದ್ಯಂತ ಮೇ 29ರ ಬೆಳಗ್ಗೆ 6 ರಿಂದ ಮೇ 31ರ ಬೆಳಗ್ಗೆ 6ರ ವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿ ಡಿಸಿ ಎಂ.ಜಿ.ಹಿರೇಮಠ ಆದೇಶಿಸಿದ್ದಾರೆ.

ಈ ವೇಳೆ ಆಸ್ಪತ್ರೆಗಳಿಗೆ ಅವಕಾಶವಿದೆ. ಅಗತ್ಯ ವಸ್ತುಗಳ ಖರೀದಿಗೆ ಲಾಕ್‌ಡೌನ್ ಅನ್ವಯಿಸುವುದಿಲ್ಲ. ಸಾರ್ವಜನಿಕ ವಿತರಣಾ ಪದ್ಧತಿಯಲ್ಲಿ ಬರುವ ನ್ಯಾಯಬೆಲೆ ಅಂಗಡಿಗಳು, ರೈತ ಸೇವಾ ಕೇಂದ್ರಗಳು ಅಂದು ಬೆಳಗ್ಗೆ 6 ರಿಂದ 10ರ ವರೆಗೆ ಮಾತ್ರ ಕಾರ್ಯನಿರ್ವಹಿಸಬೇಕು. ಪೂರ್ವಾನುಮತಿ ಪಡೆದು ನಿಗದಿಪಡಿಸಿರುವ ಮದುವೆ ಸಮಾರಂಭಗಳಿಗೆ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಆದೇಶ ಉಲ್ಲಂಘಿಸಿದವರ ವಿರುದ್ಧ ಭಾರತೀಯ ದಂಡ ಸಹಿಂತೆ 188ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net