ಶನಿವಾರಸಂತೆ ಆರೋಗ್ಯ ಕೇಂದ್ರದಲ್ಲಿ ವಿಶ್ವ ಭೂಮಿ ದಿನ ಆಚರಣೆ

22ss1bhimidina acharane (1)
ಆಲೂರು-ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಭೂಮಿ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
Published on

ಶನಿವಾರಸಂತೆ: ಸಮಿಪದ ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ವಿಶ್ವ ಭೂಮಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುಪರ್ಣಾ ಕೃಷ್ಣಾನಂದ್ ಪರಿಸರ ಪ್ರೇಮಿಯಾಗಿದ್ದು, ತಾನು ಕರ್ತವ್ಯ ನಿರ್ವಹಿಸುತ್ತಿರುವ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸುವ ಜತೆಗೆ ಆಸ್ಪತ್ರೆ ಆವರಣದಲ್ಲಿ ಗಿಡಗಳನ್ನು ಬೆಳೆಸಿದ್ದಾರೆ. ಇವರು ಪ್ರತಿ ವರ್ಷ ಪರಿಸರ ದಿನವನ್ನು ವಿಶೇಷವಾಗಿ ಆಚರಿಸುತ್ತಾರೆ.

ಆಸ್ಪತ್ರೆ ಮುಂಭಾಗದ ಉದ್ಯಾನದಲ್ಲಿ ಡಾ.ಸುಪರ್ಣಾ ಕೃಷ್ಣಾನಂದ್ ಮತ್ತು ಸಿಬ್ಬಂದಿ ಭೂ ತಾಯಿಯ ಮಹತ್ವವನ್ನು ಸಾರುವ ವಿಶ್ವ ಭೂ ಗೋಳ ಹಾಗೂ ಹಕ್ಕಿ ಪಕ್ಷಿಗಳನ್ನು ಸಂರಕ್ಷಿಸುವ ಕುರಿತಾದ ಮಾದರಿಯನ್ನು ಪ್ರದರ್ಶಿಸುವ ಮೂಲಕ ಅರ್ಥಪೂರ್ಣವಾಗಿ ವಿಶ್ವ ಭೂಮಿ ದಿನವನ್ನು ಆಚರಿಸಿದರು.

ಈ ವೇಳೆ ಮಾತನಾಡಿದ ಡಾ.ಸುಪರ್ಣಾ, ಭೂಮಿ ತಾಯಿಗೆ ಸಮಾನವಾಗಿದ್ದು ಆಧುನಿಕ, ವೈಜ್ಞಾನಿಕ ಮತ್ತು ಅಭಿವೃದ್ಧಿ ನೆಪದಲ್ಲಿ ಪರಿಸರವನ್ನು ಶೋಷಣೆ ಮಾಡಲಾಗುತ್ತಿದೆ. ಪರಿಸರದ ಮೇಲಾಗುತ್ತಿರುವ ವಿವಿಧ ರೀತಿಯ ಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ವಿಶ್ವ ಭೂಮಿ ದಿನವನ್ನು ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಜಾಗೃತಿ ಹೊಂದಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net