

ಶನಿವಾರಸಂತೆ: ಶನಿವಾರಸಂತೆ ಹಾಗೂ ಹಂಡ್ಲಿ ಕ್ಲಸ್ಟರ್ ಮಟ್ಟದ 2022-23ನೇ ಸಾಲಿನ ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮ ಶುಕ್ರವಾರ ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷೆ ಪರ್ಜಾನ್ ಬಾನು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಾಲಕರು ಮತ್ತು ಶಿಕ್ಷಕರು ಮಕ್ಕಳಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.
ಹಂಡ್ಲಿ ಕ್ಲಸ್ಟರ್ ಸಿಆರ್‌ಪಿ ಹೇಮಂತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾಸಂಸ್ಥೆ ನಿರ್ದೇಶಕ ರಂಗಸ್ವಾಮಿ, ಮಹಮ್ಮದ್‌ಗೌಸ್, ಕಾರ್ಯದರ್ಶಿ ಜಗನ್‌ಪಾಲ್, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಇ.ಎಂ.ದಯಾನಂದ್, ಪ್ರೌಢಶಾಲಾ ಮುಖ್ಯಶಿಕ್ಷಕ ನರಸಿಂಹಮೂರ್ತಿ, ಶನಿವಾರಸಂತೆ ಕ್ಲಸ್ಟರ್ ಸಿಆರ್‌ಪಿ ದಿನೇಶ್, ವಿವಿಧ ಶಾಲೆಗಳ ಮುಖ್ಯಶಿಕ್ಷಕರಾದ ಕೆ.ಪಿ.ಜಯಕುಮಾರ್, ಡಿ.ಸುಜಲಾದೇವಿ, ವಿಕ್ರಾಂತ್, ಶಿವಪ್ರಕಾಶ್, ದೇವರಾಜ್, ಉಮಾ ಮುಂತಾದವರು ಹಾಜರಿದ್ದರು.