ಶನೈಶ್ಚರಸ್ವಾಮಿ ದೇಗುಲದಲ್ಲಿ ಮಹಾಕುಂಭಾಭಿಷೇಕ

11 HANUR 2
ಹನೂರಿನ ದೇವಾಂಗಪೇಟೆಯ ಶ್ರೀ ಶನೈಶ್ಚರಸ್ವಾಮಿ ದೇಗುಲದಲ್ಲಿ ಮಹಾಕುಂಭಾಭಿಷೇಕ ನೆರವೇರಿತು.
Published on

ಹನೂರು: ಪಟ್ಟಣದ ದೇವಾಂಗಪೇಟೆಯ ಶ್ರೀ ಶನೈಶ್ಚರಸ್ವಾಮಿ ದೇಗುಲದಲ್ಲಿ ಸೋಮವಾರ ಕಳಸ ಪ್ರತಿಷ್ಠಾಪಿಸುವ ಮೂಲಕ ಜೀರ್ಣೋದ್ಧಾರದ ಮಹಾಕುಂಭಾಭಿಷೇಕವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.

ಕುಂಭಾಭಿಷೇಕ ಹಿನ್ನೆಲೆಯಲ್ಲಿ ದೇಗುಲವನ್ನು ವಿವಿಧ ಪುಷ್ಪ ಹಾಗೂ ತಳಿರು ತೋರಣದಿಂದ ಸಿಂಗರಿಸಲಾಗಿತ್ತು. ಭಾನುವಾರ ಸಂಜೆ ಮಹಿಳೆಯರು ಗಂಗೆಯನ್ನು ತಂದು ಯಾಗಶಾಲಾ ಪ್ರವೇಶಿಸಿದರು. ನಂತರ ಗಣಪತಿ ಹೋಮ, ಪುಣ್ಯಾಹ, ರಕ್ಷಾಬಂಧನ, ಸುಬ್ರಹ್ಮಣ್ಯ ಹೋಮ, ದುರ್ಗಾಹೋಮ, ರುದ್ರಹೋಮ, ಮೃತ್ಯುಂಜಯ ಹೋಮ ಸೇರಿದಂತೆ ಇತರ ಹೋಮಗಳನ್ನು ಸಾಂಪ್ರದಾಯಿಕವಾಗಿ ನೆರವೇರಿಸಿ ವಿಗ್ರಹ ಪ್ರತಿಷ್ಠಾಪಿಸಲಾಯಿತು.

ಸೋಮವಾರ ಬೆಳಗ್ಗೆ ಆದಿತ್ಯಾದಿ ನವಗ್ರಹ ಸಮೇತ ಪ್ರಾಣ ಪ್ರತಿಷ್ಠೆ, ಕಳಶಾರ್ಚನೆ, ಕಲಾತತ್ವ ಹೋಮ, ಮೂಲಹೋಮ ಹಾಗೂ ಪೂರ್ಣಾಹುತಿ ನೆರವೇರಿಸಲಾಯಿತು. ಮಧ್ಯಾಹ್ನ 12 ರಿಂದ 1 ಗಂಟೆಯೊಳಗೆ ಸಲ್ಲುವ ಶುಭ ಲಗ್ನದಲ್ಲಿ ಮಹಾ ಕುಂಭಾಭಿಷೇಕ ನೆರವೇರಿಸಲಾಯಿತು. ಬಳಿಕ ಮಹಾಮಂಗಳಾರತಿ ಬೆಳಗಿಸಿ ತೀರ್ಥ ಪ್ರಸಾದ ವಿನಿಯೋಗಿಸಲಾಯಿತು. ದೇಗುಲ ವತಿಯಿಂದ ಅನ್ನ ಸಂತರ್ಪಣೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net