

ಆಲೂರು : ನಗರ,ಪಟ್ಟಣಕ್ಕಿಂತ ಗ್ರಾಮೀಣ ಪ್ರದೇಶದಲ್ಲಿ ನಿಜವಾದ ಮತ್ತು ಜೀವಂತ ಕಲೆ ಅಡಗಿದ್ದು,ಅದನ್ನು ಉಳಿಸಿ-ಬೆಳೆಸುವ ಕೆಲಸ ಎಲ್ಲೆಡೆ ಆಗಬೇಕಿದೆ ಎಂದು ಆಲೂರು-ಸಕಲೇಶಪುರ ಬಿಜೆಪಿ ಹಿರಿಯ ಮುಖಂಡ ಸಿಮೆಂಟ್ ಮಂಜು ಹೇಳಿದರು.
ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ 28 ನೇ ವರ್ಷದ ಶ್ರೀ ದುರ್ಗಾಕಾಳೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಶ್ರೀ ಶನೈೇಶ್ವರ ಮಹಾತ್ಮೆ ಪೌರಾಣಿಕ ನಾಟಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಚಲನಚಿತ್ರದಲ್ಲಿ ದೃಶ್ಯ ಮತ್ತು ನಟನೆಯಲ್ಲಿ ಏನಾದರೂ ಲೋಪದೋಷಗಳಾದರೆ ಅದನ್ನು ಸರಿಪಡಿಸಿಕೊಳ್ಳುವ ಅವಕಾಶ ಇರುತ್ತದೆ.ಆದರೆ ರಂಗಭೂಮಿ ಪ್ರದರ್ಶನದಲ್ಲಿ ತಿದ್ದುಪಡಿಗೆ ಹಾಗೂ ತಿರುಚಲು ಯಾವುದೇ ಅವಕಾಶ ಇರುವುದಿಲ್ಲ ರಂಗಕಲೆಯನ್ನು ಕರಗತ ಮಾಡಿಕೊಂಡರೆ ಉತ್ತಮ ಸಾಮಾಜಿಕ ನಾಟಕಗಳನ್ನು ಹೊರತರಬಹುದು ಎಂಬುದಕ್ಕೆ ಹೊನ್ನೇನಹಳ್ಳಿ ಕೂಡಿಗೆ ಯುವಕರೇ ಪ್ರಮುಖ ಉದಾಹರಣೆಯಾಗಿದ್ದಾರೆ ಪೌರಾಣಿಕ ನಾಟಕಗಳು ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುವಲ್ಲಿ ಹಾಗೂ ಮಾನವೀಯತೆಯನ್ನು ಬೆಳೆಸುವಲ್ಲಿ ಕಲೆ ಸಹಕಾರಿಯಾಗಿದೆ.ಪೌರಾಣಿಕ ಕಲೆಯನ್ನು ಕಲಾವಿದರು ಮತ್ತು ಕಲಾಸಕ್ತರು ಹೆಚ್ಚೆಚ್ಚು ಪ್ರೋತ್ಸಾಹಿಸುವ ಮೂಲಕ ಅದನ್ನು ಉಳಿಸಿ,ಬೆಳೆಸಬೇಕು ಎಂದರಲ್ಲದೇ ಬಿಜೆಪಿ ಹಿರಿಯ ಮುಖಂಡ ಬಿ.ಬಿ.ಶಿವಪ್ಪಾಜಿಯವರ ತತ್ವಾ ಆದರ್ಶಗಳನ್ನು ಮೈಗೂಡಿಸಿಕೊಂಡು ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಪಕ್ಷ ನನಗೆ ಟಿಕೆಟ್ ನೀಡುವ ಬಗ್ಗೆ ಸಂಪೂರ್ಣ ಭರವಸೆ ಇದೆ ಬಿಜೆಪಿಯ ಎಲ್ಲಾ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತಗೆದುಕೊಂಡು ಚುನಾವಣೆ ಎದುರಿಸಲಾಗುವುದು ಅದ್ದರಿಂದ ತಾವುಗಳು ಮುಂದಿನ ದಿನಗಳಲ್ಲಿ ಪಕ್ಷದ ಗೆಲುವಿಗೆ ಸಹಕಾರ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಹಂಚೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ,ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಕಾಸ,ಬೈರಾಪುರ ಗ್ರಾಮ ಪಂಚಾಯಿತಿ ರುದ್ರೇಗೌಡ,ಹೇಮಂತ್ ಕುದುರವಳ್ಳಿ,ಬಿಜೆಪಿ ಮುಖಂಡ ಸಂತೋಷ್,ಅರ್ಚಕ ಲೋಕೇಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.