ಶಬ್ದ ಮಾಲಿನ್ಯಕ್ಕೆ ಬ್ರೇಕ್ ಹಾಕಿ

Shreeram Sene Memo
Published on

ಬೀದರ್: ಸುಪ್ರೀಂಕೋರ್ಟ್ ಆದೇಶದಂತೆ ಶಬ್ದ ಮಾಲಿನ್ಯ ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶ್ರೀರಾಮ ಸೇನೆ ಆಗ್ರಹಿಸಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ ಸೇನೆ ಪ್ರಮುಖರು, ನ್ಯಾಯಾಲಯ ಮತ್ತು ಸರ್ಕಾರದ ಆದೇಶವಿದ್ದರೂ ಅನಧಿಕೃತ ಮೈಕ್ ಹಾವಳಿ, ಶಬ್ದ ಮಾಲಿನ್ಯದ ವಿರುದ್ಧ ಜಿಲ್ಲೆಯಲ್ಲಿ ಕ್ರಮ ಕೈಗೊಳ್ಳದಿರುವುದು ಖಂಡನೀಯ. ಇದು ನ್ಯಾಯಾಂಗ ನಿಂದನೆಯೂ ಹೌದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಶಬ್ದ ಮಾಲಿನ್ಯ ಆಗಬಾರದು ಎಂಬುದು ಸುಪ್ರೀಂಕೋರ್ಟ್ ಆದೇಶ. ಆದರೆ ಇದನ್ನು ಜಾರಿಗೆ ತರುವಲ್ಲಿ ಸ್ಥಳೀಯ ಆಡಳಿತ ವಿಫಲವಾಗಿದೆ. ದೇವಾಲಯ, ಮಸೀದಿ, ಚರ್ಚ್, ಶಾಲಾ-ಕಾಲೇಜು, ಸರ್ಕಾರಿ ಕಚೇರಿ ಹೀಗೆ ಅನೇಕ ಪ್ರದೇಶಗಳನ್ನು ನಿಶಬ್ದ ವಲಯ ಎಂದು ಘೋಷಿಸಲಾಗಿದೆ. ಆದರೆ ಉಲ್ಲಂಘಿಸುತ್ತಿದ್ದು, ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಯಿಸಿದ್ದಾರೆ.

ಜಿಲ್ಲಾ ಅಧ್ಯಕ್ಷ ವೀರಶೆಟ್ಟಿ ಖ್ಯಾಮಾ, ಪ್ರಮುಖರಾದ ಡಾ.ವಿಶ್ವನಾಥ ಉಪ್ಪೆ, ಶಂಕರ ಖ್ಯಾಮಾ, ಶಿವಕುಮಾರ ಸಿಂಧೆ, ಮಹಾದೇವ, ಶಿವು ಮೂಲಗೆ, ಗುಂಡುರಾವ ಬಿರಾದಾರ್, ವಿನೋದ ಮನ್ನಾಳೆ, ವೀರೇಶ ನಿಡಗುಂದೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net