ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು

unnamed
Published on

ಬಾಗಲಕೋಟೆ: ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಬಸವಧರ್ಮ ಪೀಠದಿಂದ ಹಮ್ಮಿಕೊಂಡಿದ್ದ ಶರಣ ಮೇಳ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.

ಬಸವಾದಿ ಶರಣರು ೧೨ ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದವರು. ನಮ್ಮ ಚಲನೆ ರಹಿತ ಕಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ರೂಪಿಸಿದರು. ಇದನ್ನು ಮಾಡಿದ್ದು ದೇವರಲ್ಲ. ಬಹು ಸಂಖ್ಯಾತರನ್ನು ಶಿಕ್ಷಣದಿಂದ ದೂರ ಇಡಲು ಅಸಮಾನತೆಯಿಂದ ಕೂಡಿದ ಚಾತುವರ್ಣ ವ್ಯವಸ್ಥೆಯನ್ನು ಮಾಡಿದರು. ಬಸವಾದಿ ಶರಣರ ವಚನ ಚಳವಳಿ ತಾರತಮ್ಯದಿಂದ ಕೂಡಿದ ಕರ್ಮ ಸಿದ್ಧಾಂತವನ್ನು, ಮೌಡ್ಯವನ್ನು ತೊಡೆದು ಹಾಕಿತು ಎಂದರು.

ಹಣೆ ಬರಹ ಮತ್ತು ಕರ್ಮ ಸಿದ್ಧಾಂತವನ್ನು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದನ್ನು ಬಸವಣ್ಣನವರು ಸಂಪೂರ್ಣ ತಿರಸ್ಕರಿಸಿದರು. ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಾದಿ ಶರಣರು ಪ್ರತಿಪಾದಿಸಿದರು. ಧರ್ಮ ತಾರತಮ್ಯ ಮಾಡಬೇಡಿ, ಮನುಷ್ಯ ಮನುಷ್ಯನನ್ನು ದ್ವೇಷಿಸುವುದನ್ನು ಬಸವಾದಿ ಶರಣರು ವಿರೋಽಸಿದ್ದರು. ಈ ಕಾರಣಕ್ಕೇ ಇವ ನಮ್ಮವ, ಇವ ನಮ್ಮವ ಎನ್ನುವ ಉದಾತ್ತವಾದ ಮೌಲ್ಯವನ್ನು ೮೦೦ ವರ್ಷಗಳ ಹಿಂದೆಯೇ ಹೇಳಿದರು. ಹೀಗಾಗಿ ಜಾತಿ ವ್ಯವಸ್ಥೆಯನ್ನು ಶರಣರೇ ಹೋಗಲಾಡಿಸಬೇಕು ಎಂದರು.

ಜಾತಿ ಕಾರಣಕ್ಕೆ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡಬೇಕು. ಜಾತಿ, ವರ್ಗ, ಅಂತಸ್ತನ್ನು ಸೋಕಿಸಿಕೊಳ್ಳದೆ ಇರುವವರು ಮಾತ್ರ ನಿಜ ಶರಣರು. ಪಟ್ಟಭದ್ರ ಹಿತಾಸಕ್ತರು ಇರುವುದು ಬಹಳ ಕಡಿಮೆ ಜನ. ಆದರೆ ಇವರು ಸ್ಟ್ರಾಂಗ್ ಇz್ದÁರೆ. ಆದರೆ, ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದವರು ಬಹುಸಂಖ್ಯಾತರು. ಇವರು ಒಗ್ಗಟ್ಟಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯಗೆ ದಾಸೋಹರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಡಾ.ಮಾತೆ ಗಂಗಾದೇವಿಯವರು, ಪೀಠದ ಉಪಾಧ್ಯಕ್ಷ ಮಹದೇಶ್ವರ ಸ್ವಾಮೀಜಿ, ಕುಂಬಳಗೋಡಿನ ವಿಶ್ವಕಲ್ಯಾಣ ಮಿಷನ ಬಸವಯೋಗಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆ ವಹಿಸಿದ್ದರು. ಸಚಿವರಾದ ಬೈರತಿ ಸುರೇಶ, ಆರ್.ಬಿ.ತಿಮ್ಮಾಪುರ, ಶಾಸಕರಾದ ಎಂ.ನರೇಂದ್ರ ಸ್ವಾಮಿ, ಎಚ್.ವೈ.ಮೇಟಿ, ರಾಘವೇಂದ್ರ ಹಿಟ್ನಾಳ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net