ಶರಣ ಸಂಸ್ಥಾನ ಕಲ್ಯಾಣ ನಾಡಿನ ದೊಡ್ಡ ಶಕ್ತಿ

Appa-2
Published on

ಕಲಬುರಗಿ: ಶರಣಬಸವೇಶ್ವರ ಸಂಸ್ಥಾನ ಈ ಭಾಗದ ಬಹು ದೊಡ್ಡ ಶಕ್ತಿಯಾಗಿದ್ದು, ಅನ್ನ ದಾಸೋಹದ ಜತೆಗೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೂ ಶ್ರಮಿಸುತ್ತಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.

ಬಸವರಾಜಪ್ಪ ಅಪ್ಪ ಸಭಾ ಮಂಟಪದಲ್ಲಿ ಜಿಲ್ಲಾ ವೀರಶೈವ ಸಮಾಜದಿಂದ ಬುಧವಾರ ಹಮ್ಮಿಕೊಂಡಿದ್ದ ಡಾ.ಶರಣಬಸಪ್ಪ ಅಪ್ಪ, ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ ಹಾಗೂ ಪೂಜ್ಯ ಚಿ.ದೊಡ್ಡಪ್ಪ ಅಪ್ಪ ಅವರ ಜನ್ಮದಿನ ಸಮಾರಂಭ ಉದ್ಘಾಟಿಸಿ ಮಾತನಾಡಿ, ನಾಡಿನ ಲಕ್ಷಾಂತರ ಭಕ್ತರು ಶರಣ ಬಸವೇಶ್ವರರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಶಿಕ್ಷಣದ ಕೊರತೆ ಎದುರಿಸುತ್ತಿದ್ದ ಸಂದರ್ಭದಲ್ಲಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರು ಈ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ. ಕಲಬುರಗಿಯನ್ನು ಶೈಕ್ಷಣಿಕ ಹಬ್ ಆಗಿಸುವಲ್ಲಿ ಪೂಜ್ಯ ಅಪ್ಪಾಜಿ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.

ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಡಾ.ಪಿ.ಎಸ್.ಶಂಕರ ಹಾಗೂ ಪ್ರೊ.ಕೋ.ರಂ.ಬಸವರಾಜು ಅವರಿಗೆ ಶರಣಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀ ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪ, ಶ್ರೀಶೈಲ ಸಾರಂಗ ಮಠದ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ಚವದಾಪುರಿ ಮಠದ ಶ್ರೀ ಡಾ.ರಾಜಶೇಖರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶಾಸಕರಾದ ಎಂ.ವೈ.ಪಾಟೀಲ್, ಅಲ್ಲಮಪ್ರಭು ಪಾಟೀಲ್, ಡಾ.ಬಿ.ಜಿ.ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಬೋಳ, ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ ನಿಷ್ಠಿ, ಕುಲಸಚಿವ ಡಾ.ಅನೀಲಕುಮಾರ ಬಿಡವೆ, ಸಮ ಕುಲಪತಿ ಪ್ರೊ.ವಿ.ಡಿ.ಮೈತ್ರಿ, ಪ್ರಮುಖರಾದ ಕಲ್ಯಾಣಪ್ಪ ಪಾಟೀಲ್ ಮಳಖೇಡ, ಎಸ್.ವಿ.ಮಠಪತಿ, ನೀಲಕಂಠರಾವ್ ಮೂಲಗೆ, ಡಾ.ಶ್ರೀಶೈಲ ಘೂಳಿ, ಶಶಿಕಾಂತ ಪಾಟೀಲ್, ವೀರಣ್ಣ ಹೊನ್ನಳ್ಳಿ, ಸುಭಾಷ ಬಿಜಾಪುರೆ ಇತರರಿದ್ದರು.
ಜಿಲ್ಲಾ ವೀರಶೈವ ಸಮಾಜ ಅಧ್ಯಕ್ಷ ಅರುಣಕುಮಾರ ಪಾಟೀಲ್ ಕೊಡಲಹಂಗರಗಾ ಪ್ರಾಸ್ತಾವಿಕ ಮಾತನಾಡಿದರು. ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ್ ಉಪನ್ಯಾಸ ನೀಡಿದರು. ಶ್ರೀಶೈಲ ಘೂಳಿ, ಸುರೇಶ ನಂದಗಾAವ್ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಡಾ.ಕಲ್ಯಾಣರಾವ ಪಾಟೀಲ್ ವಂದಿಸಿದರು. ನಾನಾಸಾಬ್ ಅಚ್ಚಡ ನಿರೂಪಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net