

ಬಾಗಲಕೋಟೆ: ಶೋಷಣೆಗೆ ಒಳಗಾದ ಸಣ್ಣ ಸಣ್ಣ ಸಮುದಾಯಗಳನ್ನು ಒಗ್ಗೂಡಿಸಿ ಜಾತಿ, ಮತಗಳ ಬೇಧ ತೊರೆದು ಕ್ರಾಂತಿ ಮಾಡಿದ ಬಸವಾದಿ ಶರಣರ ತತ್ವ, ಆದರ್ಶಗಳು ಇಂದು ಅಗತ್ಯವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಧರ್ಮದಿಂದ ನಡೆಯದೇ ಧರ್ಮ ಧರ್ಮಗಳಲ್ಲಿ ಕದನ, ಮೇಲು, ಕೀಳು ಅಸ್ಪÈಶ್ಯತೆ ಹೋಗದೇ ಇದ್ದರೆ ಮುಂದೊAದು ದಿನ ನಮ್ಮ ಮುಂದಿನ ಪೀಳಿಗೆ ಬೇರೆ ಬೇರ ಧರ್ಮವನ್ನು ಒಪ್ಪಿಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳಿವೆ. ಅದಕ್ಕೂ ಪೂರ್ವದಲ್ಲಿ ಮಠಾಽಪತಿಗಳು, ಬುದ್ದಿ ಜೀವಿಗಳು, ಸಾಮಾಚಿಕ ಚಿಂತಕರು ಹಾಗೂ ರಾಜಕಾರಣಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದರು.
ಶರಣರ ತತ್ವ ಆಚರಣೆಗೆ ಬದ್ಧರಾಗಬೇಕಿದ್ದು, ಅಸ್ಪÈಶ್ಯತೆ ಹೋಗಲಾಡಬೇಕಾಗಿದೆ. ಈ ನಿಟ್ಟಿನಲ್ಲಿ ಯುವ ಮಿತ್ರರು ತಯಾರಾಗಬೇಕು. ನಮ್ಮ ಹಕ್ಕನ್ನು ಪಡೆದುಕೊಳ್ಳಲು ಒಗ್ಗೂಡುವ ಅಗತ್ಯವಿದೆ. ಉದ್ಯೋಗದಿಂದ ವಂಚಿತರಾಗಿ ಎಲ್ಲ ಸಮಾಜಗಳು ಬೀದಿ ಪಾಲಾಗುತ್ತಿವೆ. ತಮ್ಮ ಮೂಲ ಕಸಬು ಗೌರವಿಸಿ ಕಾಲಕ್ಕೆ ತಕ್ಕಂತೆ ಆಧುನಿಕ ಸ್ಪರ್ಶ ಕೊಡಬೇಕು. ಪ್ರತಿಯೊಂದು ಸಮಾಜದ ಕುಟುಂಬದ ಮಕ್ಕಳಿಗೆ ಶಿಕ್ಷಣ ಕೊಡಬೇಕು. ಇಲ್ಲವೇ ರಾಜಕೀಯ ಶಕ್ತಿ ಪಡೆದುಕೊಂಡಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಬೀಳಗಿ ಶಾಸಕ ಜೆ.ಟಿ.ಪಾಟೀಲ ಮಾತನಾಡಿ, ಸಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ೧೨ನೇ ಶತನಾಮದ ಶರಣರು ಶ್ರಮಿಸಿದ್ದಾರೆ. ಅವರ ಸಿದ್ದಾಂತಗಳಿಗೆ ತಿಲಾಂಜಲಿಯನ್ನಿಟ್ಟಿದ್ದೇವೆ. ಇದರಿಂದ ಅವರ ತತ್ವಗಳಿಗೆ ಅವಮಾನ ಮಾಡಿದಂತಾಗುತ್ತಿದೆ. ಸಮಾಜ ಅಭಿವೃದ್ಧಿ ಹೊಂದಬೇಕಾದರೆ ಪರಿವರ್ತನೆ ಕಾಲ ಬರಬೇಕಿದೆ. ಹಡಪದ ಅಪ್ಪಣನವರ ಬಸವಣ್ಣನವರ ಹಾದಿಯಲ್ಲಿ ನಡೆದಿದ್ದು, ನೀಲಾಂಬಿಕೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದರು.
ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಮಾತನಾಡಿ, ಹಡಪದ ಸಮುದಾಯದ ವ್ಯಕ್ತಿ ಬಿಹಾರ ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಸಮುದಾಯದವರು ಅಭಿವೃದ್ಧಿ ಹೊಂದಬೇಕಾದರೆ ಮುಂದಿನ ಪೀಳಿಗೆ ಉನ್ನತ ಶಿಕ್ಷಣ ಪಡೆದುಕೊಂಡಾಗ ಮಾತ್ರ ಸಾಧ್ಯವಾಗುತ್ತದೆ. ಸಮಾಜದಲ್ಲಿ ಸಮತೋಲನ ಇಲ್ಲ. ಮಕ್ಕಳಿಗೆ ಶಿಕ್ಷಣ ನೀಡಿ ಅವರಲ್ಲಿ ಶರಣರ ಆದರ್ಶಗಳನ್ನು ತುಂಬುವ ಕೆಲಸವಾಗಬೇಕು ಎಂದು ಹೇಳಿದರು.
ಉಪನ್ಯಾಸಕರಾಗಿ ಆಗಮಿಸಿದ್ದ ಡಾ.ಬಸವಲಿಂಗ ಮಹಾಸ್ವಾಮಿಗಳು ಮಾತನಾಡಿ, ಶರಣರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕಿದೆ. ಲಿಂಗ ಪೂಜೆಯಿಂದ ಏಕಾಗ್ರತೆ ಹಾಗೂ ಉಸಿರಾಟ ಹತೋಟಿಯಲ್ಲಿರುವದರಿಂದ ಲಿಂಗ ಪೂಜೆಯಿಂದ ಆರೋಗ್ಯ ವೃದ್ದಿಯಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಡಪದ ಅಪ್ಪಣ್ಣ ಸ್ಮರಣಾರ್ಥವಾಗಿ ನಿಜ ಸುಖಿ ಎಂಬ ಪ್ರಶಸ್ತಿಯನ್ನು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಾನಿಧ್ಯ ಅನುಭವ ಭಾರತಿ ಶ್ರೀಗಳು ವಹಿಸಿದ್ದರು. ವೇದಿಕೆ ಮೇಲೆ ನಗರಸಭೆ ಅಧ್ಯಕ್ಷೆ ಸವಿತಾ ಲೆಂಕನ್ನವರ, ಜಿಲ್ಲಾಽಕಾರಿ ಸಂಗಪ್ಪ, ಜಿ.ಪಂ ಸಿಇಒ ಶಶಿಧರ ಕುರೇರ, ಉಪವಿಭಾಗಾಽಕಾರಿ ಸಂತೋಷ ಜಗಲಾಸರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯಾಕ ನಿರ್ದೇಶಕ ಕರ್ಣಕುಮಾರ ಜೈನಾಪುರ ಸೇರಿದಂತೆ ಸಮುದಾಯ ಮುಖಂಡರಾದ ಮಲ್ಲಣ್ಣ ಹಡಪದ, ಅಶೋಕ ನಾವಿ, ಲಕ್ಷ÷್ಮಣ ಹಡಪದ, ಎಚ್.ಪಿ.ವೈದ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.