ಶರಣ್ ಪಂಪ್ವೆಲ್ ಗೆ ನಿರ್ಬಂಧ

sharan pumpwell
ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್
Published on

ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ಒಂದು ತಿಂಗಳ ಕಾಲ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಶರಣ್ ಪಂಪ್ ವೆಲ್ ಅವರನ್ನು ಕರೆಯಿಸಿ ಚಿಕ್ಕಮಗಳೂರು, ಮೂಡಿಗೆರೆ, ಆಲ್ದೂರಿನಲ್ಲಿ ಬೈಠಕ್ ನಡೆಸಲು ಹಿಂದೂಪರ ಸಂಘಟನೆಗಳು ಮುಂದಾಗಿದ್ದವು. ಶರಣ್ ಪಂಪ್ವೆಲ್ ಅವರ ಪ್ರಚೋದನಕಾರಿ ಭಾಷಣದಿಂದ ಗುಂಪು ಘರ್ಷಣೆ ಸಂಭವಿ ಸಂಭವಿಸಬಹುದು ಎಂಬ ಮುಂಜಾಗ್ರತಾ ಕಾರಣದಿಂದ ಒಂದು ತಿಂಗಳ ಕಾಲ ಚಿಕ್ಕಮಗಳೂರು ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಶರಣ್ ಪಂಪ್ವೆಲ್ ಮೇಲೆ 22 ಕ್ಕೂ ಹೆಚ್ಚು ಪ್ರಕರಣಗಳು ರಾಜ್ಯಾದ್ಯಂತ ದಾಖಲಾಗಿವೆ. ಶರಣ್ ಬಲಪಂಥೀಯ ನಿಲುವಿನಿಂದ ಪ್ರಭಾವಿತರಾಗಿದ್ದು ಕೋಮು ದ್ವೇಷ ಹರಡುವ ಭಾಷಣ ಮಾಡುವ ಪ್ರವೃತ್ತಿ ಹೊಂದಿದ್ದಾರೆ. ಇವರ ಪ್ರಚೋದನಕಾರಿ ಭಾಷಣದಿಂದ ಗಲಾಟೆ ಗುಂಪು ಘರ್ಷಣೆ ನಡೆಯುವ ಸಾಧ್ಯತೆ ಇದೆ. ಚಿಕ್ಕಮಗಳೂರು ನಗರ ಸೇರಿದಂತೆ ಕೆಲ ಪಟ್ಟಣಗಳು ಮತೀಯ ಸೂಕ್ಷ್ಮ ಪ್ರದೇಶಗಳಾಗಿವೆ. ಒಂದು ಸಣ್ಣ ಘಟನೆಯು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆ ಇದೆ. ಹೀಗಾಗಿ ಶರತ್ ಪಂಪ್ವೆಲ್ ಗೆ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡದಂತೆ ಎಸ್ಪಿ ಅವರು ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಈ ಪ್ರಸ್ತಾವನೆ ಹಿನ್ನೆಲೆಯಲ್ಲಿ ಡಿಸಿ ಮೀನಾ ನಾಗರಾಜ್ ಅವರು ಜೂ. 6ರಿಂದ ಆಗಸ್ಟ್ 4ರವರೆಗೆ ಶರಣ್ ಪಂಪ್ವೆಲ್ ಗೆ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net