ಶರತ್ ಫ್ರೆಂಡ್ಸ್ ತಂಡಕ್ಕೆ ಪ್ರಶಸ್ತಿ

IMG-20230516-WA0033
ನಾಪೋಕ್ಲು ಸಮೀಪದ ಬಲ್ಲಮಾವಟಿಯ ಬಜರಂಗಿ ಯೂತ್ ಕ್ಲಬ್ ವತಿಯಿಂದ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಿದ್ದ ದ್ವಿತೀಯ ವರ್ಷದ ಮುಕ್ತ ಟೆನಿಸ್‌ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಶರತ್ ಫ್ರೆಂಡ್ಸ್ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
Published on

ನಾಪೋಕ್ಲು: ಸಮೀಪದ ಬಲ್ಲಮಾವಟಿಯ ಬಜರಂಗಿ ಯೂತ್ ಕ್ಲಬ್ ವತಿಯಿಂದ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಿದ್ದ ದ್ವಿತೀಯ ವರ್ಷದ ಮುಕ್ತ ಟೆನಿಸ್‌ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಶರತ್ ಫ್ರೆಂಡ್ಸ್ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.


ಮಂಗಳವಾರ ಆಯೋಜಿಸಿದ್ದ ಫೈನಲ್ ಪಂದ್ಯದಲ್ಲಿ ಕೆ.ಎ.12 ವಾರಿಯರ್ಸ್ ಕೊಡಗು ತಂಡದ ವಿರುದ್ಧ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಕೆಎ 12 ತಂಡ ಏಳು ವಿಕೆಟ್ ನಷ್ಟಕ್ಕೆ 26 ರನ್ ಗಳಿಸಿತು. ಇದನ್ನು ಸುಲಭವಾಗಿ ಬೆನ್ನತ್ತಿದ ಶರತ್ ಫ್ರೆಂಡ್ಸ್ ತಂಡ 2.3 ಓವರ್‌ನಲ್ಲಿ ಒಂದು ವಿಕೆಟ್ ನಷ್ಟಕ್ಕೆ 29 ರನ್ ಗಳಿಸಿ ಗೆಲುವು ಸಾಧಿಸಿತು. ವಿಜೇತ ಶರತ್ ಫ್ರೆಂಡ್ಸ್ ತಂಡಕ್ಕೆ 25,555 ರೂ. ಹಾಗೂ ಟ್ರೋಫಿಯನ್ನು ವಿತರಿಸಲಾಯಿತು. ದ್ವಿತೀಯ ಸ್ಥಾನ ಪಡೆದ ಕೆಎ 12 ಕೊಡಗು ವಾರಿಯರ್ಸ್ ತಂಡಕ್ಕೆ 13,333 ರೂ. ಹಾಗೂ ಟ್ರೋಫಿಯನ್ನು ವಿತರಿಸಲಾಯಿತು.


ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ನೇತಾಜಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ.ಎಸ್.ಸುರೇಶ್, ಟ್ರೋಫಿ ದಾನಿ ಎಂ.ಎಂ.ಅಪ್ಪಣ್ಣ, ಎಡಿಕೇರಿ ಚರಣ್ ಪಾಲ್ಗೊಂಡಿದ್ದರು. ಟೂರ್ನಿಯಲ್ಲಿ 35 ತಂಡಗಳು ಪಾಲ್ಗೊಂಡಿದ್ದವು. ಗ್ರಾಮ ಪಂಚಾಯಿತಿ ಸದಸ್ಯ ಚೋಕಿರ ಬಾಬಿ ಭೀಮಯ್ಯ, ಬಜರಂಗಿ ಯೂತ್ ಕ್ಲಬ್ ಅಧ್ಯಕ್ಷ ಎಡಿಕೇರಿ ಪ್ರಸನ್ನ, ಸದಸ್ಯರಾದ ಎಡಿಕೇರಿ ರಾಜೇಶ್, ಕೋಟೇರ ನೂತನ್, ಎಡಿಕೇರಿ ಕೀರ್ತನ್, ನೂತನ್,ಮಧು, ಚಂದ್ರಕಾಂತ್ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಟೂರ್ನಿ ಮೂರು ದಿನಗಳ ಕಾಲ ನಡೆಯಿತು. ತೀರ್ಪುಗಾರರಾಗಿ ಮಡಿಕೇರಿಯ ಮದನ್ ಹಾಗೂ ಎಡಿಕೇರಿ ಚರಣ್ ಕಾರ್ಯನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net