ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದ ಪೂರ್ವ ಸಿದ್ಧತೆ ಪರಿಶೀಲನೆ

21blrp2
ಬೇಲೂರಿನಲ್ಲಿ ಆಯೋಜಿಸಿರುವ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದ ಪೂರ್ವ ಸಿದ್ಧತೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ಪಡೆದುಕೊಂಡರು.
Published on

ಬೇಲೂರು: ಬೇಲೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಸೆ.26ರಿಂದ ಅಕ್ಟೋಬರ್ 5ರವರೆಗೆ ಆಯೋಜಿಸಿರುವ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದ ಪೂರ್ವ ಸಿದ್ಧತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಬುಧವಾರ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.


ಧರ್ಮ ಸಮ್ಮೇಳನದ ಕಾರ್ಯಕ್ರಮ ನಡೆಯುವ, ರಂಭಾಪುರಿ ಜಗದ್ಗುರುಗಳು ತಂಗುವ, ಮೆರವಣಿಗೆ ನಡೆಯುವ ಸ್ಥಳ, ವಾಹನ ನಿಲ್ದಾಣ ಹಾಗೂ ಹೆಲಿಪ್ಯಾಡ್ ಪರಿಶೀಲನೆಯನ್ನು ಇಲಾಖೆ ಸಿಬ್ಬಂದಿಯೊಂದಿಗೆ ಪರಿಶೀಲಿಸಿದರು.


ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹರಿರಾಮ್ ಶಂಕರ್, ದಸರಾ ಧರ್ಮ ಸಮ್ಮೇಳನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸೇರಿದಂತೆ ಸಚಿವರು, ಗಣ್ಯರು ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಭದ್ರತೆ, ವ್ಯವಸ್ಥೆ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವುದರಿಂದ ವಾಹನಗಳ ನಿಯಂತ್ರಣದ ವ್ಯವಸ್ಥೆ ರೂಪಿಸುವ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಅಲ್ಲದೆ ಆಯೋಜಕರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಧಾರ್ಮಿಕ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.


ಅರಸೀಕರೆ ಡಿವೈಎಸ್‌ಪಿ ಅಶೋಕ್ ಕುಮಾರ್, ವೃತ್ತ ನಿರೀಕ್ಷಕ ಶ್ರೀಕಾಂತ್, ಪಿಎಸ್‌ಐ ಶಿವನಗೌಡ ಪಾಟೀಲ್, ದಸರಾ ಧರ್ಮಸಮ್ಮೇಳನ ಸಮಿತಿ ಕೋಶಾಧ್ಯಕ್ಷ ನಟರಾಜ್, ಪ್ರಚಾರ ಸಮಿತಿ ಅಧ್ಯಕ್ಷ ಹಗರೆ ದಿಲೀಪ್, ಸಂಚಾಲಕ ಸಂಜಯ್ ಕೌರಿ, ಕೌಶಿಕ್ ಮೊಗಸವರ, ಆಹ್ವಾನ ಪತ್ರಿಕೆ ವಿತರಣಾ ಸಮಿತಿ ಅಧ್ಯಕ್ಷ ಮಲ್ಲೇಶ್, ಅಲಂಕಾರ ಸಮಿತಿ ಅಧ್ಯಕ್ಷ ಪ್ರದೀಪ್, ಸ್ವಾಗತ ಸಮಿತಿ ಅಧ್ಯಕ್ಷ ಕೌರಿ ರಾಜಶೇಖರ್, ಪೂಜಾ ಸಮಿತಿ ಅಧ್ಯಕ್ಷ ರಘು, ಧರ್ಮರಾಜು, ಮಾಧ್ಯಮ ಸಮಿತಿಯ ಸುನೀಲ್, ಚಂದ್ರಶೇಖರ್ ಪಡುವಳಲು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net