ಶ್ರಮದಾನದ ಮೂಲಕ ರಸ್ತೆ ಗುಂಡಿಗೆ ಮುಕ್ತಿ

ಶ್ರಮದಾನದ ಮೂಲಕ ರಸ್ತೆ ಗುಂಡಿಗೆ ಮುಕ್ತಿ
Published on

ನಾಪೋಕ್ಲು: ಇಲ್ಲಿನ ಆಟೋ ಚಾಲಕರು ವಾಹನ ಸಂಚಾರಕ್ಕೆ ಶ್ರಮದಾನ ಮಾಡಿ ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ.

ಸಮೀಪದ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಬಳಿ ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳು ಬಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಗುಂಡಿಗಳಲ್ಲಿ ಮಳೆ ನೀರು ನಿಂತು ಚಾಲಕರು ಅಪಾಯಕ್ಕೆ ಗುರಿಯಾಗುತ್ತಿದ್ದರು. ಸಂಬಂಧ ಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗದಿದ್ದರಿಂದ ಗುರುವಾರ ನಾಪೋಕ್ಲುವಿನ ಆಟೋ ಚಾಲಕರು ಸ್ವಯಂ ಪ್ರೇರಿತರಾಗಿ ಜಲ್ಲಿ ಕಲ್ಲುಗಳನ್ನು ತಂದು ರಸ್ತೆ ಗುಂಡಿ ಮುಚ್ಚುವ ಕಾರ್ಯ ಮಾಡಿದ್ದಾರೆ.

ಆಟೋ ಚಾಲಕರ ಸಂಘದ ಮಾಜಿ ಅಧ್ಯಕ್ಷ ರಜಾಕ್, ಚಾಲಕ ಸತೀಶ್, ಚೇತನ್, ಕಿರಣ್, ವಿನು, ಬಿಪಿನ್, ವಿಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net