ಶಸಾಪ ಪೊನ್ನಂಪೇಟೆ ತಾಲೂಕು ಅಧ್ಯಕ್ಷರಾಗಿ ಲೋಕೇಶ್ ನೇಮಕ

28 gkp 01
ಜೆ.ಎಸ್ ಲೋಕೇಶ್
Published on

ಗೋಣಿಕೊಪ್ಪ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್(ಶಸಾಪ) ಪೊನ್ನಂಪೇಟೆ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಧನುಗಾಲ ಗ್ರಾಮದ ಕಾಫಿ ಬೆಳೆಗಾರ ಜೆ.ಎಸ್.ಲೋಕೇಶ್ ಅವರನ್ನು ನೇಮಕ ಮಾಡಲಾಗಿದೆ. ಶರಣ ಸಾಹಿತ್ಯ ಚಟುವಟಿಕೆಯನ್ನು ತಾಲ್ಲೂಕಿನಾದ್ಯಂತ ಹೆಚ್ಚಾಗಿ ಪ್ರಚಾರಪಡಿಸುವ ಮೂಲಕ ಜನಸಾಮಾನ್ಯರಲ್ಲಿ ವಚನ ಸಾಹಿತ್ಯದ ಅರಿವು ಮೂಡಿಸಬೇಕಿದೆ ಎಂದು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net