ಶಸ್ತ್ರಾಸ್ತ್ರ ಒಪ್ಪಿಸಲು ಡಿಸಿ ಆದೇಶ

CTD DC T. venktesh--0006
Published on

ಚಿತ್ರದುರ್ಗ: ಗ್ರಾಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ನಡೆಯುವ ಉಪಚುನಾವಣೆ ಸಂಬಂಧ ಚಿತ್ರದುರ್ಗ, ಚಳ್ಳಕೆರೆ ನಗರಸಭೆ ಹಾಗೂ ನಾಯಕನಹಟ್ಟಿ ಪಪಂ ಹಾಗೂ ವಿವಿಧ ಗ್ರಾಪಂಗಳ ವ್ಯಾಪ್ತಿಯಲ್ಲಿ ಬಂದೂಕು ಪರವಾನಗಿ ಪಡೆದಿರುವ ನಾಗರಿಕರು ತಮ್ಮಲ್ಲಿರುವ ಗನ್,ಪಿಸ್ತೂಲ್ ಇತ್ಯಾದಿ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶಿಸಿದ್ದಾರೆ. ಈ ಆದೇಶ ಬ್ಯಾಂಕ್, ಕೇಂದ್ರ ಹಾಗೂ ರಾಜ್ಯಸರ್ಕಾರಿ ಒಡೆತನದ ಸಂಸ್ಥೆಗಳ ಶಸ್ತ್ರಾಸ್ತ್ರಗಳಿಗೆ ಅನ್ವಯಿಸುವುದಿಲ್ಲ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net