

ಚಿತ್ರದುರ್ಗ:ಜಿಲ್ಲೆಯಲ್ಲಿ ಜು.23ರಂದು ವಿವಿಧ ಗ್ರಾಪಂಗಳ ಖಾಲಿ ಇದ್ದ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು,ಈ ನಿಮಿತ್ತ ಆಯಾ ಕ್ಷೇತ್ರದ ವ್ಯಾಪ್ತಿಯ ನಾಗರಿಕರು ತಮ್ಮ ಬಳಿ ಗನ್,ಪಿಸ್ತೂಲ್ ಇತ್ಯಾದಿ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸುವಂತೆ ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಅವರು ಆದೇಶಿಸಿದ್ದಾರೆ.
ಮೊಳಕಾಲ್ಮೂರು ತಾಲೂಕು ಜಹಗೀರ್‌ಬುಡ್ಡೇನಹಳ್ಳಿ,ಚಳ್ಳಕೆರೆಯ ಮಲ್ಲೂರಹಳ್ಳಿ ಹಾಗೂ ಚಿತ್ರದುರ್ಗ ತಾಲೂಕಿನ ಕೂನಬೇವು ಗ್ರಾಪಂ ವ್ಯಾಪ್ತಿಯ ಪರವಾನಗಿ ಹೊಂದಿರುವ ನಾಗರಿಕರು ಶಸ್ತ್ರಾಸ್ತ್ರಗಳನ್ನು ಕೂಡಲೇ ಪೊಲೀಸರ ವಶಕ್ಕೆ ಒಪ್ಪಿಸಬೇಕು. ವಿನಾಯಿತಿಗೆ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಕ್ರಮವಹಿಸಲಾಗುವುದು ಹಾಗೂ ಈ ಆದೇಶವು ನೀತಿ ಸಂಹಿತೆ ಮುಕ್ತಾಯವಾಗುವವರೆಗೆ ಜಾರಿಯಲ್ಲಿರುತ್ತದೆ ಎಂದು ಡಿಸಿ ತಿಳಿಸಿದ್ದಾರೆ.